Acts · chapter 25 · verse 3
Acts 25:3 in Kannada
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
Avanannu kolluvadakkaagi daariyalli honchu haakuttaa avanannu yeroosalemininda kareyisa bekendu avanige virodhavaagi bedikondaru.
Acts 25:3 in English
- King James Version (KJV)
- And desired favour against him, that he would send for him to Jerusalem, laying wait in the way to kill him.
- World English Bible (WEB)
- asking a favor against him, that he would summon him to Jerusalem, plotting to kill him on the way.
- American Standard Version (ASV)
- asking a favor against him, that he would send for him to Jerusalem; laying a plot to kill him on the way.
- Bible in Basic English (BBE)
- Requesting Festus to give effect to their design against him, and send him to Jerusalem, when they would be waiting to put him to death on the way.
- Darby Translation (DBY)
- asking as a grace against him that he would send for him to Jerusalem, laying people in wait to kill him on the way.
- Webster's Bible (WBS)
- And desired favor against him, that he would send for him to Jerusalem, laying wait in the way to kill him.
- Young's Literal Translation (YLT)
- asking favour against him, that he may send for him to Jerusalem, making an ambush to put him to death in the way.
Read in context
- 1ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
- 2ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.
- 3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- 4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
- 5ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
Cross references
- Acts 9:24 ಅಪೊಸ್ತಲರ ಕೃತ್ಯಗಳು 9:24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- Acts 23:12–15 ಅಪೊಸ್ತಲರ ಕೃತ್ಯಗಳು 23:12–15ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Luke 23:8–24 ಲೂಕನು 23:8–24ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು. ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ. ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು. ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು. ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ-- ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ. ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು. ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು). ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು). ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು. ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
- Mark 6:23–25 ಮಾರ್ಕನು 6:23–25ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
- John 16:3 ಯೋಹಾನನು 16:3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- Psalm 64:2–6 ಕೀರ್ತನೆಗಳು 64:2–6ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು. ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Psalm 140:1–5 ಕೀರ್ತನೆಗಳು 140:1–5ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು. ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ. ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ. ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Romans 3:8 ರೋಮಾಪುರದವರಿಗೆ 3:8(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
- Acts 26:9–11 ಅಪೊಸ್ತಲರ ಕೃತ್ಯಗಳು 26:9–11ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- 1 Samuel 23:19–21 1 ಸಮುವೇಲನು 23:19–21ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ? ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು. ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
Original words (Greek)
- desired · G154αἰτέω aitéō
- favour · G5485χάρις cháris
- against · G2596κατά katá
- him · G846αὐτός autós
- that · G3704ὅπως hópōs
- for · G3343μεταπέμπω metapémpō
- him · G846αὐτός autós
- to · G1519εἰς eis
- Jerusalem · G2419Ἱερουσαλήμ Hierousalḗm
- laying · G4160ποιέω poiéō
- wait · G1747ἐνέδρα enédra
- in · G2596κατά katá
- way · G3598ὁδός hodós
- kill · G337ἀναιρέω anairéō
- him · G846αὐτός autós