Acts · chapter 26 · verse 23
Acts 26:23 in Kannada
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
Kristanu baadheyannanubhavisi sattava rolaginda modalaneyavanaagi eddu praje galigoo anyajanaangadavarigoo belakannu torisu vavanaagirabekaagittu.
Acts 26:23 in English
- King James Version (KJV)
- That Christ should suffer, [and] that he should be the first that should rise from the dead, and should shew light unto the people, and to the Gentiles.
- World English Bible (WEB)
- how the Christ must suffer, and how, by the resurrection of the dead, he would be first to proclaim light both to these people and to the Gentiles.”
- American Standard Version (ASV)
- how that the Christ must suffer, [and] how that he first by the resurrection of the dead should proclaim light both to the people and to the Gentiles.
- Bible in Basic English (BBE)
- That the Christ would go through pain, and being the first to come back from the dead, would give light to the people and to the Gentiles.
- Darby Translation (DBY)
- [namely,] whether Christ should suffer; whether he first, through resurrection of [the] dead, should announce light both to the people and to the nations.
- Webster's Bible (WBS)
- That Christ should suffer, [and] that he should be the first that should rise from the dead, and should show light to the people, and to the Gentiles.
- Young's Literal Translation (YLT)
- that the Christ is to suffer, whether first by a rising from the dead, he is about to proclaim light to the people and to the nations.'
Read in context
- 21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
- 22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- 23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- 24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
- 25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
Cross references
- Isaiah 53:1–12 ಯೆಶಾಯ 53:1–12ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು? ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Luke 24:26 ಲೂಕನು 24:26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Daniel 9:24–26 ದಾನಿಯೇಲನು 9:24–26ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Hebrews 2:10 ಇಬ್ರಿಯರಿಗೆ 2:10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Luke 2:32 ಲೂಕನು 2:32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- 1 Corinthians 15:20–23 1 ಕೊರಿಂಥದವರಿಗೆ 15:20–23ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು. ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು. ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- 1 Corinthians 15:3 1 ಕೊರಿಂಥದವರಿಗೆ 15:3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Psalm 22:1–31 ಕೀರ್ತನೆಗಳು 22:1–31ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು. ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ. ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ. ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ. ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು. ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು. ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು. ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು. ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
Original words (Greek)
- That · G1487εἰ ei
- Christ · G5547Χριστός Christós
- should · G3195μέλλω méllō
- suffer · G3805παθητός pathētós
- that · G1487εἰ ei
- first · G4413πρῶτος prōtos
- rise · G386ἀνάστασις anástasis
- from · G1537ἐκ ek
- dead · G3498νεκρός nekrós
- shew · G2605καταγγέλλω katangéllō
- light · G5457φῶς phōs
- people · G2992λαός laós
- and · G2532καί kaí
- Gentiles · G1484ἔθνος éthnos