Acts · chapter 27 · verse 23
Acts 27:23 in Kannada
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
Naanu yaaravanaagiddeno yaarannu sevisutteno aa devara dootanu ee raatriyalli nanna hattira nintu--
Acts 27:23 in English
- King James Version (KJV)
- For there stood by me this night the angel of God, whose I am, and whom I serve,
- World English Bible (WEB)
- For there stood by me this night an angel, belonging to the God whose I am and whom I serve,
- American Standard Version (ASV)
- For there stood by me this night an angel of the God whose I am, whom also I serve,
- Bible in Basic English (BBE)
- For this night there came to my side an angel of the God who is my Master and whose servant I am,
- Darby Translation (DBY)
- For an angel of the God, whose I am and whom I serve, stood by me this night,
- Webster's Bible (WBS)
- For there stood by me this night the angel of God, whose I am, and whom I serve,
- Young's Literal Translation (YLT)
- for there stood by me this night a messenger of God — whose I am, and whom I serve —
Read in context
- 21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
- 22ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
- 23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- 24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- 25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
Cross references
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Isaiah 44:21 ಯೆಶಾಯ 44:21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
- Acts 12:8–11 ಅಪೊಸ್ತಲರ ಕೃತ್ಯಗಳು 12:8–11ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Acts 18:9 ಅಪೊಸ್ತಲರ ಕೃತ್ಯಗಳು 18:9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Daniel 6:22 ದಾನಿಯೇಲನು 6:22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- Daniel 6:16 ದಾನಿಯೇಲನು 6:16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
- Acts 8:26 ಅಪೊಸ್ತಲರ ಕೃತ್ಯಗಳು 8:26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.