Acts · chapter 28 · verse 10
Acts 28:10 in Kannada
ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
Avaru saha nammannu bahalavaagi gauravisi sanmaanisidaru; naavu horataaga namage avashya vaadavugalannu tandu hadaginallittaru.
Acts 28:10 in English
- King James Version (KJV)
- Who also honoured us with many honours; and when we departed, they laded [us] with such things as were necessary.
- World English Bible (WEB)
- They also honored us with many honors; and when we sailed, they put on board the things that we needed.
- American Standard Version (ASV)
- who also honored us with many honors; and when we sailed, they put on board such things as we needed.
- Bible in Basic English (BBE)
- Then they gave us great honour, and, when we went away, they put into the ship whatever things we were in need of.
- Darby Translation (DBY)
- who also honoured us with many honours, and on our leaving they made presents to us of what should minister to our wants.
- Webster's Bible (WBS)
- Who also honored us with many honors; and when we departed, they laded [us] with such things as were necessary.
- Young's Literal Translation (YLT)
- who also with many honours did honour us, and we setting sail — they were lading [us] with the things that were necessary.
Read in context
- 8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
- 9ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.
- 10ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
- 11ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
- 12ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.
Cross references
- 1 Thessalonians 2:6 1 ಥೆಸಲೊನೀಕದವರಿಗೆ 2:6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- Philippians 4:11–12 ಫಿಲಿಪ್ಪಿಯವರಿಗೆ 4:11–12ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ. ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
- Matthew 6:31–34 ಮತ್ತಾಯನು 6:31–34ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು. ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 1 Timothy 5:3–4 1 ತಿಮೊಥೆಯನಿಗೆ 5:3–4ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ. ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- 2 Corinthians 8:2–6 2 ಕೊರಿಂಥದವರಿಗೆ 8:2–6ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು. ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
- Matthew 10:8–10 ಮತ್ತಾಯನು 10:8–10ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ. ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ. ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- 2 Corinthians 9:5–11 2 ಕೊರಿಂಥದವರಿಗೆ 9:5–11ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು. ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Matthew 15:5–6 ಮತ್ತಾಯನು 15:5–6ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- 2 Kings 8:9 2 ಅರಸುಗಳು 8:9ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.