Acts · chapter 3 · verse 15
Acts 3:15 in Kannada
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
Jeevaadhi patiyannu kollisidiri; devaru aatananne sattava rolaginda ebbisiddaane; idakke naavu saakshigalaa giddeve.
Acts 3:15 in English
- King James Version (KJV)
- And killed the Prince of life, whom God hath raised from the dead; whereof we are witnesses.
- World English Bible (WEB)
- and killed the Prince of life, whom God raised from the dead, to which we are witnesses.
- American Standard Version (ASV)
- and killed the Prince of life; whom God raised from the dead; whereof we are witnesses.
- Bible in Basic English (BBE)
- And put to death the Lord of life; whom God gave back from the dead; of which fact we are witnesses.
- Darby Translation (DBY)
- but the originator of life ye slew, whom God raised from among [the] dead, whereof we are witnesses.
- Webster's Bible (WBS)
- And killed the Prince of life, whom God hath raised from the dead; of which we are witnesses.
- Young's Literal Translation (YLT)
- and the Prince of the life ye did kill, whom God did raise out of the dead, of which we are witnesses;
Read in context
- 13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- 14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- 15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- 16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- 17ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
Cross references
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- Acts 2:32 ಅಪೊಸ್ತಲರ ಕೃತ್ಯಗಳು 2:32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- Acts 13:30–32 ಅಪೊಸ್ತಲರ ಕೃತ್ಯಗಳು 13:30–32ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
- John 5:26 ಯೋಹಾನನು 5:26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- John 1:4 ಯೋಹಾನನು 1:4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- Hebrews 2:10 ಇಬ್ರಿಯರಿಗೆ 2:10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ