Acts · chapter 3 · verse 18
Acts 3:18 in Kannada
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
Kristanu baadhepada bekendu devaru mundaagi tanna ellaa pravaadi gala baayinda helisidavugalannu heege neraveri sidanu.
Acts 3:18 in English
- King James Version (KJV)
- But those things, which God before had shewed by the mouth of all his prophets, that Christ should suffer, he hath so fulfilled.
- World English Bible (WEB)
- But the things which God announced by the mouth of all his prophets, that Christ should suffer, he thus fulfilled.
- American Standard Version (ASV)
- But the things which God foreshowed by the mouth of all the prophets, that his Christ should suffer, he thus fulfilled.
- Bible in Basic English (BBE)
- But the things which God had made clear before, by the mouth of all the prophets, that the Christ would have to undergo, he has put into effect in this way.
- Darby Translation (DBY)
- but God has thus fulfilled what he had announced beforehand by the mouth of all the prophets, that his Christ should suffer.
- Webster's Bible (WBS)
- But those things which God before had shown by the mouth of all his prophets, that Christ should suffer, he hath so fulfilled.
- Young's Literal Translation (YLT)
- and God, what things before He had declared through the mouth of all His prophets, that the Christ should suffer, He did thus fulfil;
Read in context
- 16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- 17ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
- 18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
- 19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- 20ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
Cross references
- Isaiah 53:1–12 ಯೆಶಾಯ 53:1–12ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು? ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Acts 26:22–23 ಅಪೊಸ್ತಲರ ಕೃತ್ಯಗಳು 26:22–23ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Luke 24:26–27 ಲೂಕನು 24:26–27ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- 1 Corinthians 15:3–4 1 ಕೊರಿಂಥದವರಿಗೆ 15:3–4ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Acts 17:2–3 ಅಪೊಸ್ತಲರ ಕೃತ್ಯಗಳು 17:2–3ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- 1 Peter 1:10–11 1 ಪೇತ್ರನು 1:10–11ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Acts 28:23 ಅಪೊಸ್ತಲರ ಕೃತ್ಯಗಳು 28:23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
Original words (Greek)
- But · G1161δέ dé
- things · G3588ὁ ho
- which · G3739ὅς hós
- God · G2316θεός theós
- shewed · G4293προκαταγγέλλω prokatangéllō
- by · G1223διά diá
- mouth · G4750στόμα stóma
- all · G3956πᾶς pâs
- his · G846αὐτός autós
- prophets · G4396προφήτης prophḗtēs
- that · G3958πάσχω páschō
- Christ · G5547Χριστός Christós
- suffer · G3958πάσχω páschō
- hath · G4137πληρόω plēróō
- so · G3779οὕτω hoútō
- fulfilled · G4137πληρόω plēróō