Acts · chapter 4 · verse 11
Acts 4:11 in Kannada
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
Mane kattuvavaraada nimminda heenaisalpatta ee kalle mukhyavaada moolegallaa yitu.
Acts 4:11 in English
- King James Version (KJV)
- This is the stone which was set at nought of you builders, which is become the head of the corner.
- World English Bible (WEB)
- He is ‘the stone which was regarded as worthless by you, the builders, which has become the head of the corner.’
- American Standard Version (ASV)
- He is the stone which was set at nought of you the builders, which was made the head of the corner.
- Bible in Basic English (BBE)
- He is the stone which you builders had no use for, but which has been made the chief stone of the building.
- Darby Translation (DBY)
- He is the stone which has been set at nought by you the builders, which is become the corner stone.
- Webster's Bible (WBS)
- This is the stone which was set at naught by you builders, which is become the head of the corner.
- Young's Literal Translation (YLT)
- 'This is the stone that was set at nought by you — the builders, that became head of a corner;
Read in context
- 9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
- 10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- 11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- 12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- 13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
Cross references
- Psalm 118:22–23 ಕೀರ್ತನೆಗಳು 118:22–23ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Mark 12:10–12 ಮಾರ್ಕನು 12:10–12ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು. ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
- Matthew 21:42–45 ಮತ್ತಾಯನು 21:42–45ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು. ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು. ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- 1 Peter 2:6–8 1 ಪೇತ್ರನು 2:6–8ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Luke 20:16–18 ಲೂಕನು 20:16–18ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು. ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
- Zechariah 3:9 ಜೆಕರ್ಯ 3:9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Zechariah 4:6–7 ಜೆಕರ್ಯ 4:6–7ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Isaiah 58:1–2 ಯೆಶಾಯ 58:1–2ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು. ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.