Acts · chapter 4 · verse 2
Acts 4:2 in Kannada
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
Yaakandare yesuvina moolaka sattavarige punarutthaanavaaguvadendu apostalaru janarige bodhisi kalisuttiddadarinda avaru santaapapattiddaru.
Acts 4:2 in English
- King James Version (KJV)
- Being grieved that they taught the people, and preached through Jesus the resurrection from the dead.
- World English Bible (WEB)
- being upset because they taught the people and proclaimed in Jesus the resurrection from the dead.
- American Standard Version (ASV)
- being sore troubled because they taught the people, and proclaimed in Jesus the resurrection from the dead.
- Bible in Basic English (BBE)
- Being greatly troubled because they were teaching the people and preaching Jesus as an example of the coming back from the dead.
- Darby Translation (DBY)
- being distressed on account of their teaching the people and preaching by Jesus the resurrection from among [the] dead;
- Webster's Bible (WBS)
- Being grieved that they taught the people, and preached through Jesus the resurrection from the dead.
- Young's Literal Translation (YLT)
- being grieved because of their teaching the people, and preaching in Jesus the rising again out of the dead —
Read in context
- 1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- 2ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
- 3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
- 4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
Cross references
- Acts 17:18 ಅಪೊಸ್ತಲರ ಕೃತ್ಯಗಳು 17:18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
- Acts 24:14–15 ಅಪೊಸ್ತಲರ ಕೃತ್ಯಗಳು 24:14–15ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
- 1 Thessalonians 4:13–14 1 ಥೆಸಲೊನೀಕದವರಿಗೆ 4:13–14ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ. ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- 1 Corinthians 15:12–20 1 ಕೊರಿಂಥದವರಿಗೆ 15:12–20ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ. ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- John 11:47–48 ಯೋಹಾನನು 11:47–48ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- 2 Corinthians 4:13–14 2 ಕೊರಿಂಥದವರಿಗೆ 4:13–14ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ. ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- Acts 3:15 ಅಪೊಸ್ತಲರ ಕೃತ್ಯಗಳು 3:15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Acts 24:21 ಅಪೊಸ್ತಲರ ಕೃತ್ಯಗಳು 24:21ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
- Acts 26:23 ಅಪೊಸ್ತಲರ ಕೃತ್ಯಗಳು 26:23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- Acts 10:40–43 ಅಪೊಸ್ತಲರ ಕೃತ್ಯಗಳು 10:40–43ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು. ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
Original words (Greek)
- grieved · G1278διαπονέω diaponéō
- that · G1223διά diá
- they · G846αὐτός autós
- taught · G1321διδάσκω didáskō
- people · G2992λαός laós
- and · G2532καί kaí
- preached · G2605καταγγέλλω katangéllō
- through · G1722ἐν en
- Jesus · G2424Ἰησοῦς Iēsoûs
- resurrection · G386ἀνάστασις anástasis
- from · G1537ἐκ ek
- dead · G3498νεκρός nekrós