Acts · chapter 4 · verse 20
Acts 4:20 in Kannada
ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
Yaakandare naavu kandu kelidavu galannu maatanaadade iralaarevu endu helidaru.
Acts 4:20 in English
- King James Version (KJV)
- For we can not but speak the things which we have seen and heard.
- World English Bible (WEB)
- for we can’t help telling the things which we saw and heard.”
- American Standard Version (ASV)
- for we cannot but speak the things which we saw and heard.
- Bible in Basic English (BBE)
- For it is not possible for us to keep from saying what we have seen and have knowledge of.
- Darby Translation (DBY)
- for as for us we cannot refrain from speaking of the things which we have seen and heard.
- Webster's Bible (WBS)
- For we cannot but speak the things which we have seen and heard.
- Young's Literal Translation (YLT)
- for we cannot but speak what we did see and hear.'
Read in context
- 18ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
- 19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- 20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- 21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- 22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
Cross references
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- Acts 22:15 ಅಪೊಸ್ತಲರ ಕೃತ್ಯಗಳು 22:15ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
- 1 Corinthians 9:16–17 1 ಕೊರಿಂಥದವರಿಗೆ 9:16–17ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ! ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
- 1 John 1:1–3 1 ಯೋಹಾನನು 1:1–3ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Ezekiel 3:11 ಯೆಹೆಜ್ಕೇಲನು 3:11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- Acts 5:32 ಅಪೊಸ್ತಲರ ಕೃತ್ಯಗಳು 5:32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- Jeremiah 1:17–19 ಯೆರೆಮೀಯ 1:17–19ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Acts 10:39–41 ಅಪೊಸ್ತಲರ ಕೃತ್ಯಗಳು 10:39–41ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು; ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Numbers 22:38 ಅರಣ್ಯಕಾಂಡ 22:38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
- Luke 1:2 ಲೂಕನು 1:2ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
- Job 32:18–20 ಯೋಬನು 32:18–20ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.