Acts · chapter 5 · verse 30
Acts 5:30 in Kannada
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
Neevu marakke tooguhaaki konda yesuvannu namma pitrugala devaru ebbisidanu.
Acts 5:30 in English
- King James Version (KJV)
- The God of our fathers raised up Jesus, whom ye slew and hanged on a tree.
- World English Bible (WEB)
- The God of our fathers raised up Jesus, whom you killed, hanging him on a tree.
- American Standard Version (ASV)
- The God of our fathers raised up Jesus, whom ye slew, hanging him on a tree.
- Bible in Basic English (BBE)
- The God of our fathers gave Jesus back to life, whom you had put to death, hanging him on a tree.
- Darby Translation (DBY)
- The God of our fathers has raised up Jesus, whom ye have slain, having hanged on a cross.
- Webster's Bible (WBS)
- The God of our fathers raised up Jesus, whom ye slew and hanged on a tree:
- Young's Literal Translation (YLT)
- and the God of our fathers did raise up Jesus, whom ye slew, having hanged upon a tree;
Read in context
- 28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- 29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- 30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
- 31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- 32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
Cross references
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Acts 10:39 ಅಪೊಸ್ತಲರ ಕೃತ್ಯಗಳು 10:39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
- Acts 13:28–29 ಅಪೊಸ್ತಲರ ಕೃತ್ಯಗಳು 13:28–29ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- Acts 4:10–11 ಅಪೊಸ್ತಲರ ಕೃತ್ಯಗಳು 4:10–11ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- Acts 3:13–15 ಅಪೊಸ್ತಲರ ಕೃತ್ಯಗಳು 3:13–15ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Acts 2:22–24 ಅಪೊಸ್ತಲರ ಕೃತ್ಯಗಳು 2:22–24ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- Luke 1:55 ಲೂಕನು 1:55ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- 1 Chronicles 29:18 1 ಪೂರ್ವಕಾಲವೃತ್ತಾಂತ 29:18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- Acts 2:32 ಅಪೊಸ್ತಲರ ಕೃತ್ಯಗಳು 2:32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- Acts 13:33 ಅಪೊಸ್ತಲರ ಕೃತ್ಯಗಳು 13:33ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.