Acts · chapter 6 · verse 2
Acts 6:2 in Kannada
ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
Aaga aa hanneradu mandiyu shishyara samoohavannu tamma balige karedu--naavu devara vaakyavannu bittu upachaara maaduvadu vihitavaadaddalla.
Acts 6:2 in English
- King James Version (KJV)
- Then the twelve called the multitude of the disciples [unto them], and said, It is not reason that we should leave the word of God, and serve tables.
- World English Bible (WEB)
- The twelve summoned the multitude of the disciples and said, “It is not appropriate for us to forsake the word of God and serve tables.
- American Standard Version (ASV)
- And the twelve called the multitude of the disciples unto them, and said, It is not fit that we should forsake the word of God, and serve tables.
- Bible in Basic English (BBE)
- And the Apostles sent for all the disciples and said, It is not right for us to give up preaching the word of God in order to make distribution of food.
- Darby Translation (DBY)
- And the twelve, having called the multitude of the disciples to [them], said, It is not right that we, leaving the word of God, should serve tables.
- Webster's Bible (WBS)
- Then the twelve called the multitude of the disciples, and said, It is not reason that we should leave the word of God, and serve tables.
- Young's Literal Translation (YLT)
- and the twelve, having called near the multitude of the disciples, said, 'It is not pleasing that we, having left the word of God, do minister at tables;
Read in context
- 1ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
- 2ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
- 3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- 4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
Cross references
- Deuteronomy 1:9–14 ಧರ್ಮೋಪದೇಶಕಾಂಡ 1:9–14ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ. ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ. ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ? ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು. ಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ
- Exodus 18:17–26 ವಿಮೋಚನಕಾಂಡ 18:17–26ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ; ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ. ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು. ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು. ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು. ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು. ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು. ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- 2 Timothy 2:4 2 ತಿಮೊಥೆಯನಿಗೆ 2:4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- Nehemiah 6:3 ನೆಹೆಮೀಯ 6:3ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
- Numbers 11:11–13 ಅರಣ್ಯಕಾಂಡ 11:11–13ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ? ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
- Acts 25:27 ಅಪೊಸ್ತಲರ ಕೃತ್ಯಗಳು 25:27ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
- Acts 21:22 ಅಪೊಸ್ತಲರ ಕೃತ್ಯಗಳು 21:22ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
Original words (Greek)
- Then · G1161δέ dé
- twelve · G1427δώδεκα dṓdeka
- called · G4341προσκαλέομαι proskaléomai
- multitude · G4128πλῆθος plēthos
- disciples · G3101μαθητής mathētḗs
- and · G1161δέ dé
- said · G2036ἔπω épō
- is · G2076ἐστί estí
- not · G3756οὐ ou
- reason · G701ἀρεστός arestós
- that · G2641καταλείπω kataleípō
- we · G2248ἡμᾶς hēmâs
- leave · G2641καταλείπω kataleípō
- word · G3056λόγος lógos
- God · G2316θεός theós
- serve · G1247διακονέω diakonéō
- tables · G5132τράπεζα trápeza