Acts · chapter 7 · verse 16
Acts 7:16 in Kannada
ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
Avarannu shekemige tegedukondu hogi shekemana tandeyaada hamorana makkalinda abrahaamanu hanakottu kondukondidda samaadhiyolage ittaru.
Acts 7:16 in English
- King James Version (KJV)
- And were carried over into Sychem, and laid in the sepulchre that Abraham bought for a sum of money of the sons of Emmor [the father] of Sychem.
- World English Bible (WEB)
- and they were brought back to Shechem and laid in the tomb that Abraham bought for a price in silver from the children of Hamor of Shechem.
- American Standard Version (ASV)
- and they were carried over unto Shechem, and laid in the tomb that Abraham bought for a price in silver of the sons of Hamor in Shechem.
- Bible in Basic English (BBE)
- And they were taken over to Shechem, and put to rest in the place which Abraham got for a price in silver from the sons of Hamor in Shechem.
- Darby Translation (DBY)
- and were carried over to Sychem and placed in the sepulchre which Abraham bought for a sum of money of the sons of Emmor the [father] of Sychem.
- Webster's Bible (WBS)
- And were carried over into Sychem, and laid in the sepulcher that Abraham bought for a sum of money of the sons of Emmor [the father] of Sychem.
- Young's Literal Translation (YLT)
- and they were carried over into Sychem, and were laid in the tomb that Abraham bought for a price in money from the sons of Emmor, of Sychem.
Read in context
- 14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- 15ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
- 16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- 17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
- 18ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
Cross references
- Joshua 24:32 ಯೆಹೋಶುವ 24:32ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- Genesis 23:16 ಆದಿಕಾಂಡ 23:16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
- Exodus 13:19 ವಿಮೋಚನಕಾಂಡ 13:19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
- Genesis 34:2–31 ಆದಿಕಾಂಡ 34:2–31ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು. ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು. ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು. ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು. ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು. ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು. ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ; ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ. ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು. ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು. ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು. ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು. ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ. ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು. ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು; ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು. ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು. ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ-- ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ. ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು. ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು. ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು. ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು. ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು. ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು. ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು. ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು. ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
- Genesis 33:9–20 ಆದಿಕಾಂಡ 33:9–20ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು. ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು. ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು. ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು. ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು. ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು. ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು. ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು. ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು. ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು. ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
- Genesis 49:29–32 ಆದಿಕಾಂಡ 49:29–32ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Genesis 35:19 ಆದಿಕಾಂಡ 35:19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
Original words (Greek)
- And · G2532καί kaí
- over · G3346μετατίθημι metatíthēmi
- into · G1519εἰς eis
- Sychem · G4966Συχέμ Sychém
- and · G2532καί kaí
- laid · G5087τίθημι títhēmi
- in · G1722ἐν en
- sepulchre · G3418μνῆμα mnēma
- that · G3739ὅς hós
- Abraham · G11Ἀβραάμ Abraám
- bought · G5608ὠνέομαι ōnéomai
- sum · G5092τιμή timḗ
- money · G694ἀργύριον argýrion
- sons · G5207υἱός huiós
- of · G3844παρά pará
- Emmor · G1697Ἐμμόρ Emmór
- of · G3844παρά pará
- Sychem · G4966Συχέμ Sychém