Acts · chapter 7 · verse 36
Acts 7:36 in Kannada
ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
Avanu aiguptadeshadalliyoo kempu samudra dalliyoo naalvattu varusha adaviyalliyoo adbhuta kaaryagalannoo soochakakaaryagalannoo maadida mele avarannu nadesikondu bandanu.
Acts 7:36 in English
- King James Version (KJV)
- He brought them out, after that he had shewed wonders and signs in the land of Egypt, and in the Red sea, and in the wilderness forty years.
- World English Bible (WEB)
- This man led them out, having worked wonders and signs in Egypt, in the Red Sea, and in the wilderness for forty years.
- American Standard Version (ASV)
- This man led them forth, having wrought wonders and signs in Egypt, and in the Red sea, and in the wilderness forty years.
- Bible in Basic English (BBE)
- This man took them out, having done wonders and signs in Egypt and in the Red Sea and in the waste land, for forty years.
- Darby Translation (DBY)
- He led them out, having wrought wonders and signs in the land of Egypt, and in the Red sea, and in the wilderness forty years.
- Webster's Bible (WBS)
- He brought them out, after he had showed wonders and signs in the land of Egypt, and in the Red sea, and in the wilderness forty years.
- Young's Literal Translation (YLT)
- this one did bring them forth, having done wonders and signs in the land of Egypt, and in the Red Sea, and in the wilderness forty years;
Read in context
- 34ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
- 35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- 36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- 37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
- 38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
Cross references
- Exodus 12:41 ವಿಮೋಚನಕಾಂಡ 12:41ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
- Exodus 33:1 ವಿಮೋಚನಕಾಂಡ 33:1ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.
- Psalm 78:12–33 ಕೀರ್ತನೆಗಳು 78:12–33ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು. ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು. ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು. ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು. ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು. ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ. ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು. ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು. ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ. ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- Exodus 14:27–29 ವಿಮೋಚನಕಾಂಡ 14:27–29ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು. ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
- Exodus 16:35 ವಿಮೋಚನಕಾಂಡ 16:35ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- Exodus 7:1–14 ವಿಮೋಚನಕಾಂಡ 7:1–14ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು. ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು. ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು. ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು. ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು. ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು. ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ-- ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು. ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು. ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Numbers 16:1–17 ಅರಣ್ಯಕಾಂಡ 16:1–17ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು. ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು. ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ: ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು. ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ. ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ? ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು. ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ, ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ? ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು. ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು. ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.
- Psalm 106:17–18 ಕೀರ್ತನೆಗಳು 106:17–18ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- Nehemiah 9:18–22 ನೆಹೆಮೀಯ 9:18–22ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ. ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ. ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ. ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- Deuteronomy 2:25–37 ಧರ್ಮೋಪದೇಶಕಾಂಡ 2:25–37ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು. ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ-- ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು. ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ. ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Acts 13:18 ಅಪೊಸ್ತಲರ ಕೃತ್ಯಗಳು 13:18ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
Original words (Greek)
- He · G3778οὗτος hoûtos
- brought · G1806ἐξάγω exágō
- them · G846αὐτός autós
- out · G1806ἐξάγω exágō
- shewed · G4160ποιέω poiéō
- wonders · G5059τέρας téras
- and · G2532καί kaí
- signs · G4592σημεῖον sēmeîon
- in · G1722ἐν en
- land · G1093γῆ gē
- Egypt · G125Αἴγυπτος Aígyptos
- and · G2532καί kaí
- in · G1722ἐν en
- the · G2281θάλασσα thálassa
- sea · G2281θάλασσα thálassa
- and · G2532καί kaí
- in · G1722ἐν en
- wilderness · G2048ἔρημος érēmos
- forty · G5062τεσσαράκοντα tessarákonta
- years · G2094ἔτος étos