Acts · chapter 7 · verse 39
Acts 7:39 in Kannada
ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
Aadare nama pitrugalu avana maatugalige vidheyaraagade avanannu tallibittu tamma hrudayagalalli hindakke aiguptada kadege tirugikondu
Acts 7:39 in English
- King James Version (KJV)
- To whom our fathers would not obey, but thrust [him] from them, and in their hearts turned back again into Egypt,
- World English Bible (WEB)
- to whom our fathers wouldn’t be obedient, but rejected him and turned back in their hearts to Egypt,
- American Standard Version (ASV)
- to whom our fathers would not be obedient, but thrust him from them, and turned back in their hearts unto Egypt,
- Bible in Basic English (BBE)
- By whom our fathers would not be controlled; but they put him on one side, turning back in their hearts to Egypt,
- Darby Translation (DBY)
- to whom our fathers would not be subject, but thrust [him] from them, and in their hearts turned back to Egypt,
- Webster's Bible (WBS)
- Whom our fathers would not obey, but thrust [him] from them, and in their hearts turned back again into Egypt,
- Young's Literal Translation (YLT)
- to whom our fathers did not wish to become obedient, but did thrust away, and turned back in their hearts to Egypt,
Read in context
- 37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
- 38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
- 39ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- 40ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
- 41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
Cross references
- Numbers 14:3–4 ಅರಣ್ಯಕಾಂಡ 14:3–4ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ? ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
- Numbers 11:5 ಅರಣ್ಯಕಾಂಡ 11:5ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
- Nehemiah 9:16–17 ನೆಹೆಮೀಯ 9:16–17ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು. ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- Acts 7:51–52 ಅಪೊಸ್ತಲರ ಕೃತ್ಯಗಳು 7:51–52ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Ezekiel 20:6–14 ಯೆಹೆಜ್ಕೇಲನು 20:6–14ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು. ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು. ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು; ಆದದರಿಂದ ನಾನು ಅವರನ್ನು ಐಗುಪ್ತ ದೇಶದಿಂದ ಹೊರಗೆ ಕರತಂದು ಅರಣ್ಯದೊಳಗೆ ಅವರನ್ನು ಬರಮಾಡಿದೆನು. ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು. ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು. ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು. ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
- Exodus 16:3 ವಿಮೋಚನಕಾಂಡ 16:3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- Exodus 14:11–12 ವಿಮೋಚನಕಾಂಡ 14:11–12ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ? ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
- Psalm 106:32–33 ಕೀರ್ತನೆಗಳು 106:32–33ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- 1 Kings 2:27 1 ಅರಸುಗಳು 2:27ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
- Judges 11:2 ನ್ಯಾಯಸ್ಥಾಪಕರು 11:2ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- Exodus 17:3 ವಿಮೋಚನಕಾಂಡ 17:3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
Original words (Greek)
- whom · G3739ὅς hós
- our · G2257ἡμῶν hēmōn
- fathers · G3962πατήρ patḗr
- would · G2309θέλω thélō
- not · G3756οὐ ou
- obey · G5255ὑπήκοος hypḗkoos
- but · G235ἀλλά allá
- thrust · G683ἀπωθέομαι apōthéomai
- them · G683ἀπωθέομαι apōthéomai
- and · G2532καί kaí
- in · G2588καρδία kardía
- their · G846αὐτός autós
- hearts · G2588καρδία kardía
- again · G4762στρέφω stréphō
- into · G1519εἰς eis
- Egypt · G125Αἴγυπτος Aígyptos