Acts · chapter 7 · verse 46
Acts 7:46 in Kannada
ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
Daaveedanu devara sannidhaanadalli daye hondi yaakobana devarigoskara aalaya vannu kattabekendu apekshisidanu.
Acts 7:46 in English
- King James Version (KJV)
- Who found favour before God, and desired to find a tabernacle for the God of Jacob.
- World English Bible (WEB)
- who found favor in the sight of God, and asked to find a habitation for the God of Jacob.
- American Standard Version (ASV)
- who found favor in the sight of God, and asked to find a habitation for the God of Jacob.
- Bible in Basic English (BBE)
- Who was pleasing to God; and he had a desire to make a holy tent for the God of Jacob.
- Darby Translation (DBY)
- who found favour before God, and asked to find a tabernacle for the God of Jacob;
- Webster's Bible (WBS)
- Who found favor before God, and desired to find a tabernacle for the God of Jacob.
- Young's Literal Translation (YLT)
- who found favour before God, and requested to find a tabernacle for the God of Jacob;
Read in context
- 44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- 45ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
- 46ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
- 47ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
- 48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
Cross references
- Psalm 132:1–5 ಕೀರ್ತನೆಗಳು 132:1–5ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ. ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ-- ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು; ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- Acts 13:22 ಅಪೊಸ್ತಲರ ಕೃತ್ಯಗಳು 13:22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
- 2 Samuel 7:1–5 2 ಸಮುವೇಲನು 7:1–5ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ, ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು. ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು. ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ-- ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
- 2 Samuel 6:21 2 ಸಮುವೇಲನು 6:21ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
- 1 Chronicles 17:1–4 1 ಪೂರ್ವಕಾಲವೃತ್ತಾಂತ 17:1–4ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು. ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು. ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
- 2 Samuel 7:8–16 2 ಸಮುವೇಲನು 7:8–16ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು; ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು. ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 2 Samuel 7:18–19 2 ಸಮುವೇಲನು 7:18–19ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು? ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
- 1 Samuel 16:11–13 1 ಸಮುವೇಲನು 16:11–13ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು. ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 1 Chronicles 22:7–8 1 ಪೂರ್ವಕಾಲವೃತ್ತಾಂತ 22:7–8ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು. ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
- 1 Chronicles 28:2–5 1 ಪೂರ್ವಕಾಲವೃತ್ತಾಂತ 28:2–5ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು. ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು. ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು; ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
- Psalm 78:68–72 ಕೀರ್ತನೆಗಳು 78:68–72ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.