Acts · chapter 7 · verse 47
Acts 7:47 in Kannada
ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
Aadare solomonanu aatanigoskara maneyannu kattisidanu.
Acts 7:47 in English
- King James Version (KJV)
- But Solomon built him an house.
- World English Bible (WEB)
- But Solomon built him a house.
- American Standard Version (ASV)
- But Solomon built him a house.
- Bible in Basic English (BBE)
- But Solomon was the builder of his house.
- Darby Translation (DBY)
- but Solomon built him a house.
- Webster's Bible (WBS)
- But Solomon built him a house.
- Young's Literal Translation (YLT)
- and Solomon built Him an house.
Read in context
- 45ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
- 46ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
- 47ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
- 48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- 49ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
Cross references
- 1 Kings 8:20 1 ಅರಸುಗಳು 8:20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- 2 Samuel 7:13 2 ಸಮುವೇಲನು 7:13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- 1 Kings 6:37–38 1 ಅರಸುಗಳು 6:37–38ನಾಲ್ಕನೇ ವರುಷದ ಜೀಪ್ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು. ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
- 1 Kings 7:13–51 1 ಅರಸುಗಳು 7:13–51ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು. ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು. ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು. ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು. ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು. ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು. ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು. ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು. ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು. ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು. ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು. ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು. ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು. ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು. ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು. ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು. ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು. ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು. ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು. ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು. ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು. ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ. ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು. ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 1 Kings 5:1–2 1 ಅರಸುಗಳು 5:1–2ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು. ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
- 1 Chronicles 17:1 1 ಪೂರ್ವಕಾಲವೃತ್ತಾಂತ 17:1ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
- 2 Chronicles 2:1–4 2 ಪೂರ್ವಕಾಲವೃತ್ತಾಂತ 2:1–4ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು; ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು. ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು. ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- Zechariah 6:12–13 ಜೆಕರ್ಯ 6:12–13ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- 2 Chronicles 3:1 2 ಪೂರ್ವಕಾಲವೃತ್ತಾಂತ 3:1ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.