Acts · chapter 7 · verse 48
Acts 7:48 in Kannada
ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
Aadaroo mahonnatanu kaiyinda kattida aalayagalalli vaasamaaduvaatanalla. Yaakandare--
Acts 7:48 in English
- King James Version (KJV)
- Howbeit the most High dwelleth not in temples made with hands; as saith the prophet,
- World English Bible (WEB)
- However, the Most High doesn’t dwell in temples made with hands, as the prophet says,
- American Standard Version (ASV)
- Howbeit the Most High dwelleth not in [houses] made with hands; as saith the prophet,
- Bible in Basic English (BBE)
- But still, the Most High has not his resting-place in houses made with hands, as the prophet says,
- Darby Translation (DBY)
- But the Most High dwells not in [places] made with hands; as says the prophet,
- Webster's Bible (WBS)
- Yet, the Most High dwelleth not in temples made with hands, as saith the prophet,
- Young's Literal Translation (YLT)
- 'But the Most High in sanctuaries made with hands doth not dwell, according as the prophet saith:
Read in context
- 46ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
- 47ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
- 48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- 49ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
- 50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
Cross references
- Acts 17:24–25 ಅಪೊಸ್ತಲರ ಕೃತ್ಯಗಳು 17:24–25ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ. ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Isaiah 66:1–2 ಯೆಶಾಯ 66:1–2ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ? ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- 2 Chronicles 2:5–6 2 ಪೂರ್ವಕಾಲವೃತ್ತಾಂತ 2:5–6ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ. ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Psalm 91:9 ಕೀರ್ತನೆಗಳು 91:9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Daniel 4:17 ದಾನಿಯೇಲನು 4:17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
- Psalm 92:8 ಕೀರ್ತನೆಗಳು 92:8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
- Daniel 4:24–25 ದಾನಿಯೇಲನು 4:24–25ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- Psalm 7:17 ಕೀರ್ತನೆಗಳು 7:17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.