Acts · chapter 7 · verse 50
Acts 7:50 in Kannada
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
Ivugalannellaa nanna kaiye nirmisitallaa embadaagi kartanu heluttaane endu pravaadiyu nudididdaane.
Acts 7:50 in English
- King James Version (KJV)
- Hath not my hand made all these things?
- World English Bible (WEB)
- Didn’t my hand make all these things?’
- American Standard Version (ASV)
- Did not my hand make all these things?
- Bible in Basic English (BBE)
- Did not my hand make all these things?
- Darby Translation (DBY)
- has not my hand made all these things?
- Webster's Bible (WBS)
- Hath not my hand made all these things?
- Young's Literal Translation (YLT)
- hath not My hand made all these things?
Read in context
- 48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- 49ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
- 50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
- 51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- 52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
Cross references
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Isaiah 66:2 ಯೆಶಾಯ 66:2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- Psalm 33:6–9 ಕೀರ್ತನೆಗಳು 33:6–9ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು. ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ. ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ. ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Isaiah 45:12 ಯೆಶಾಯ 45:12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- Psalm 50:9–12 ಕೀರ್ತನೆಗಳು 50:9–12ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Isaiah 45:7–8 ಯೆಶಾಯ 45:7–8ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ. ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Isaiah 40:28 ಯೆಶಾಯ 40:28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.