Acts · chapter 8 · verse 2
Acts 8:2 in Kannada
ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
Bhaktaraada janaru stephananannu hottukondu hogi hoonittu avanigoskara bahalavaagi golaadidaru.
Acts 8:2 in English
- King James Version (KJV)
- And devout men carried Stephen [to his burial], and made great lamentation over him.
- World English Bible (WEB)
- Devout men buried Stephen and lamented greatly over him.
- American Standard Version (ASV)
- And devout men buried Stephen, and made great lamentation over him.
- Bible in Basic English (BBE)
- And God-fearing men put Stephen's body in its last resting-place, making great weeping over him.
- Darby Translation (DBY)
- And pious men buried Stephen and made great lamentation over him.
- Webster's Bible (WBS)
- And devout men carried Stephen [to his burial] , and made great lamentation over him.
- Young's Literal Translation (YLT)
- and devout men carried away Stephen, and made great lamentation over him;
Read in context
- 1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- 2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- 4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
Cross references
- Genesis 50:10–11 ಆದಿಕಾಂಡ 50:10–11ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು. ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
- 2 Chronicles 35:25 2 ಪೂರ್ವಕಾಲವೃತ್ತಾಂತ 35:25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 32:33 2 ಪೂರ್ವಕಾಲವೃತ್ತಾಂತ 32:33ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
- Acts 2:5 ಅಪೊಸ್ತಲರ ಕೃತ್ಯಗಳು 2:5ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
- John 11:31–35 ಯೋಹಾನನು 11:31–35ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು. ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು. ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. ಯೇಸು ಅತ್ತನು.
- Deuteronomy 34:8 ಧರ್ಮೋಪದೇಶಕಾಂಡ 34:8ಇಸ್ರಾಯೇಲ್ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
- 2 Samuel 3:31 2 ಸಮುವೇಲನು 3:31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
- Numbers 20:29 ಅರಣ್ಯಕಾಂಡ 20:29ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- Genesis 23:2 ಆದಿಕಾಂಡ 23:2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- Jeremiah 22:10 ಯೆರೆಮೀಯ 22:10ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Jeremiah 22:18 ಯೆರೆಮೀಯ 22:18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.