Acts · chapter 8 · verse 23
Acts 8:23 in Kannada
ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
Yaakandare neenu haanikara vaada vishadalliyoo dushtatvada bandhanadalliyoo irutteeyendu nanage kaanuttade andanu.
Acts 8:23 in English
- King James Version (KJV)
- For I perceive that thou art in the gall of bitterness, and [in] the bond of iniquity.
- World English Bible (WEB)
- For I see that you are in the poison of bitterness and in the bondage of iniquity.”
- American Standard Version (ASV)
- For I see that thou art in the gall of bitterness and in the bond of iniquity.
- Bible in Basic English (BBE)
- For I see that you are prisoned in bitter envy and the chains of sin.
- Darby Translation (DBY)
- for I see thee to be in the gall of bitterness, and bond of unrighteousness.
- Webster's Bible (WBS)
- For I perceive that thou art in the gall of bitterness, and [in] the bond of iniquity.
- Young's Literal Translation (YLT)
- for in the gall of bitterness, and bond of unrighteousness, I perceive thee being.'
Read in context
- 21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- 22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- 23ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
- 24ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
- 25ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
Cross references
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Isaiah 58:6 ಯೆಶಾಯ 58:6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- John 8:34 ಯೋಹಾನನು 8:34ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Deuteronomy 29:18–20 ಧರ್ಮೋಪದೇಶಕಾಂಡ 29:18–20ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Deuteronomy 32:32–33 ಧರ್ಮೋಪದೇಶಕಾಂಡ 32:32–33ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Romans 6:17–22 ರೋಮಾಪುರದವರಿಗೆ 6:17–22ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.