Acts · chapter 9 · verse 15
Acts 9:15 in Kannada
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
Aadare kartanu avanige--neenu hogu; yaakandare aa manushyanu anyajanara mundeyoo arasugala mundeyoo israayelyara mundeyoo nanna hesarannu horuvadakkaagi naanu aarisikonda paatreyaagiddaane.
Acts 9:15 in English
- King James Version (KJV)
- But the Lord said unto him, Go thy way: for he is a chosen vessel unto me, to bear my name before the Gentiles, and kings, and the children of Israel:
- World English Bible (WEB)
- But the Lord said to him, “Go your way, for he is my chosen vessel to bear my name before the nations and kings, and the children of Israel.
- American Standard Version (ASV)
- But the Lord said unto him, Go thy way: for he is a chosen vessel unto me, to bear my name before the Gentiles and kings, and the children of Israel:
- Bible in Basic English (BBE)
- But the Lord said, Go without fear: for he is a special vessel for me, to give to the Gentiles and kings and to the children of Israel the knowledge of my name:
- Darby Translation (DBY)
- And the Lord said to him, Go, for this [man] is an elect vessel to me, to bear my name before both nations and kings and [the] sons of Israel:
- Webster's Bible (WBS)
- But the Lord said to him, Go, for he is a chosen vessel to me, to bear my name before the Gentiles, and kings, and the children of Israel.
- Young's Literal Translation (YLT)
- And the Lord said unto him, 'Be going on, because a choice vessel to Me is this one, to bear My name before nations and kings — the sons also of Israel;
Read in context
- 13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- 14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- 15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- 17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
Cross references
- Galatians 1:15–16 ಗಲಾತ್ಯದವರಿಗೆ 1:15–16ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು; ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Romans 11:13 ರೋಮಾಪುರದವರಿಗೆ 11:13ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
- 2 Timothy 4:16–17 2 ತಿಮೊಥೆಯನಿಗೆ 4:16–17ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Acts 26:17–20 ಅಪೊಸ್ತಲರ ಕೃತ್ಯಗಳು 26:17–20ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Acts 22:21 ಅಪೊಸ್ತಲರ ಕೃತ್ಯಗಳು 22:21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- 2 Timothy 1:11 2 ತಿಮೊಥೆಯನಿಗೆ 1:11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- Galatians 1:1 ಗಲಾತ್ಯದವರಿಗೆ 1:1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.