Acts · chapter 9 · verse 16
Acts 9:16 in Kannada
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
Avanu nanna hesarina nimitta eshtu kathinavaada shrameyannanubhavisabekembadannu naane avanige torisuvenu endu helidanu.
Acts 9:16 in English
- King James Version (KJV)
- For I will shew him how great things he must suffer for my name’s sake.
- World English Bible (WEB)
- For I will show him how many things he must suffer for my name’s sake.”
- American Standard Version (ASV)
- for I will show him how many things he must suffer for my name’s sake.
- Bible in Basic English (BBE)
- For I will make clear to him what troubles he will have to undergo for me.
- Darby Translation (DBY)
- for I will shew to him how much he must suffer for my name.
- Webster's Bible (WBS)
- For I will show him how great things he must suffer for my name's sake.
- Young's Literal Translation (YLT)
- for I will shew him how many things it behoveth him for My name to suffer.'
Read in context
- 14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- 15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- 17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- 18ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
Cross references
- 1 Thessalonians 3:3 1 ಥೆಸಲೊನೀಕದವರಿಗೆ 3:3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- Acts 21:11 ಅಪೊಸ್ತಲರ ಕೃತ್ಯಗಳು 21:11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
- 2 Corinthians 6:4 2 ಕೊರಿಂಥದವರಿಗೆ 6:4ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 2 Corinthians 11:23–27 2 ಕೊರಿಂಥದವರಿಗೆ 11:23–27ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- 2 Timothy 2:9–10 2 ತಿಮೊಥೆಯನಿಗೆ 2:9–10ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- Matthew 5:11 ಮತ್ತಾಯನು 5:11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- 1 Corinthians 4:9–13 1 ಕೊರಿಂಥದವರಿಗೆ 4:9–13ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು. ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.