Amos · chapter 1 · verse 11
Amos 1:11 in Kannada
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
Kartanu heege heluttaane--edomina mooru mattu naalkara aparaadhagala nimittavaagi naanu adara dandaneyinda tappisuvadilla. Avanu tanna ellaa kanikaragalannu bisaadibittu tanna saho daranannu kattiya sahita himbaalisidanu. Avana kopavu nirantaravaagi hariyuttittu; tanna raudra vannu nityavaagi ittukondanu.
Amos 1:11 in English
- King James Version (KJV)
- Thus saith the LORD; For three transgressions of Edom, and for four, I will not turn away [the punishment] thereof; because he did pursue his brother with the sword, and did cast off all pity, and his anger did tear perpetually, and he kept his wrath for ever:
- World English Bible (WEB)
- The LORD says: “For three transgressions of Edom, yes, for four, I will not turn away its punishment, because he pursued his brother with the sword and cast off all pity, and his anger raged continually, and he kept his wrath forever;
- American Standard Version (ASV)
- Thus saith Jehovah: For three transgressions of Edom, yea, for four, I will not turn away the punishment thereof; because he did pursue his brother with the sword, and did cast off all pity, and his anger did tear perpetually, and he kept his wrath for ever.
- Bible in Basic English (BBE)
- These are the words of the Lord: For three crimes of Edom, and for four, I will not let its fate be changed; because his sword was turned against his brother, without pity, and his wrath was burning at all times, and he was angry for ever.
- Darby Translation (DBY)
- Thus saith Jehovah: For three transgressions of Edom, and for four, I will not revoke its sentence; because he pursued his brother with the sword, and cast off all pity; and his anger did tear continually, and he kept his wrath for ever.
- Webster's Bible (WBS)
- Thus saith the LORD; For three transgressions of Edom, and for four, I will not turn away its [punishment] : because he pursued his brother with the sword, and cast off all pity, and his anger did tear perpetually, and [he] kept his wrath for ever:
- Young's Literal Translation (YLT)
- Thus said Jehovah: For three transgressions of Edom, And for four, I do not reverse it, Because of his pursuing with a sword his brother, And he hath destroyed his mercies, And tear perpetually doth his anger, And his wrath — he hath kept it for ever,
Read in context
- 9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
- 10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
- 11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
- 12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- 13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
Cross references
- Ezekiel 25:12–14 ಯೆಹೆಜ್ಕೇಲನು 25:12–14ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 2 Chronicles 28:17 2 ಪೂರ್ವಕಾಲವೃತ್ತಾಂತ 28:17ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.
- Numbers 20:14–21 ಅರಣ್ಯಕಾಂಡ 20:14–21ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು. ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ. ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- Joel 3:19 ಯೋವೇಲ 3:19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
- Malachi 1:4 ಮಲಾಕಿಯ 1:4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- Jeremiah 49:7–22 ಯೆರೆಮೀಯ 49:7–22ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ? ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ. ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು. ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ. ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ. ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ. ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು. ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು. ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
- Obadiah 1:1–14 ಓಬದ್ಯ 1:1–14ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ! ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ. ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ? ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ. ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ. ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ? ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು. ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
- Ezekiel 35:1–15 ಯೆಹೆಜ್ಕೇಲನು 35:1–15ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ, ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು; ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು. ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು. ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು. ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ. ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು. ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- Deuteronomy 2:4–8 ಧರ್ಮೋಪದೇಶಕಾಂಡ 2:4–8ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ. ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು. ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು. ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
Original words (Hebrew)
- saith · H559אָמַר ʼâmar
- three · H7969שָׁלוֹשׁ shâlôwsh
- transgressions · H6588פֶּשַׁע peshaʻ
- Edom · H123אֱדֹם ʼĔdôm
- four · H702אַרְבַּע ʼarbaʻ
- away · H7725שׁוּב shûwb
- pursue · H7291רָדַף râdaph
- brother · H251אָח ʼâch
- sword · H2719חֶרֶב chereb
- off · H7843שָׁחַת shâchath
- pity · H7356רַחַם racham
- anger · H639אַף ʼaph
- tear · H2963טָרַף ṭâraph
- perpetually · H5703עַד ʻad
- kept · H8104שָׁמַר shâmar
- wrath · H5678עֶבְרָה ʻebrâh
- ever · H5331נֶצַח netsach