Amos · chapter 3 · verse 13
Amos 3:13 in Kannada
ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
Sainyagala devaraada kartanaagiruva devaru heluvadenandare--neevu keli yaakobina manetanadavarige saakshikodiri.
Amos 3:13 in English
- King James Version (KJV)
- Hear ye, and testify in the house of Jacob, saith the Lord GOD, the God of hosts,
- World English Bible (WEB)
- “Listen, and testify against the house of Jacob,” says the Lord GOD, the God of Armies.
- American Standard Version (ASV)
- Hear ye, and testify against the house of Jacob, saith the Lord Jehovah, the God of hosts.
- Bible in Basic English (BBE)
- Give ear now, and give witness against the family of Jacob, says the Lord God, the God of armies;
- Darby Translation (DBY)
- Hear ye, and testify in the house of Jacob, saith the Lord Jehovah, the God of hosts,
- Webster's Bible (WBS)
- Hear ye, and testify in the house of Jacob, saith the Lord GOD, the God of hosts,
- Young's Literal Translation (YLT)
- Hear ye and testify to the house of Jacob, An affirmation of the Lord Jehovah, God of Hosts.
Read in context
- 11ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
- 12ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
- 13ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
- 14ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
- 15ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
Cross references
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- 2 Kings 17:15 2 ಅರಸುಗಳು 17:15ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
- Joshua 22:22 ಯೆಹೋಶುವ 22:22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- Acts 18:5–6 ಅಪೊಸ್ತಲರ ಕೃತ್ಯಗಳು 18:5–6ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Ephesians 4:17 ಎಫೆಸದವರಿಗೆ 4:17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- Isaiah 1:24 ಯೆಶಾಯ 1:24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
- Deuteronomy 30:18–19 ಧರ್ಮೋಪದೇಶಕಾಂಡ 30:18–19ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- 2 Chronicles 24:19 2 ಪೂರ್ವಕಾಲವೃತ್ತಾಂತ 24:19ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Deuteronomy 8:19 ಧರ್ಮೋಪದೇಶಕಾಂಡ 8:19ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- 2 Kings 17:13 2 ಅರಸುಗಳು 17:13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.