Amos · chapter 3 · verse 2
Amos 3:2 in Kannada
ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
Bhoomiya ellaa kutumbagalalli nimmannu maatrave tilididdene; aadadarinda naanu nimma ellaa akramagaligaagi shikshisuttene.
Amos 3:2 in English
- King James Version (KJV)
- You only have I known of all the families of the earth: therefore I will punish you for all your iniquities.
- World English Bible (WEB)
- “I have chosen only you of all the families of the earth. Therefore I will punish you for all of your sins.”
- American Standard Version (ASV)
- You only have I known of all the families of the earth: therefore I will visit upon you all your iniquities.
- Bible in Basic English (BBE)
- You only of all the families of the earth have I taken care of: for this reason I will send punishment on you for all your sins.
- Darby Translation (DBY)
- You only have I known of all the families of the earth; therefore will I visit upon you all your iniquities.
- Webster's Bible (WBS)
- You only have I known of all the families of the earth: therefore I will punish you for all your iniquities.
- Young's Literal Translation (YLT)
- Only you I have known of all families of the land, Therefore I charge on you all your iniquities.
Read in context
- 1ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
- 2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- 3ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?
- 4ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
Cross references
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Deuteronomy 10:15 ಧರ್ಮೋಪದೇಶಕಾಂಡ 10:15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Zechariah 14:17–18 ಜೆಕರ್ಯ 14:17–18ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
- Jeremiah 14:10 ಯೆರೆಮೀಯ 14:10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- Jeremiah 9:25 ಯೆರೆಮೀಯ 9:25ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Psalm 147:19 ಕೀರ್ತನೆಗಳು 147:19ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- Genesis 10:32 ಆದಿಕಾಂಡ 10:32ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
- Jeremiah 1:15 ಯೆರೆಮೀಯ 1:15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.