Amos · chapter 4 · verse 12
Amos 4:12 in Kannada
ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
Aadada rinda o israayele, ninage naanu heege maaduttene; naanu ninage idannu maaduvadarinda neenu ninna devarannu edurugollalu siddha maadiko.igo, bettagalannu roopisi gaali yannu nirmisi manushyanige avana yochane enendu tilisi udayavannu andhakaaravannaagi maadi bhoomiya unnata sthalagalannu tulidu biduvaatanu aatane. Kartanoo sainyagala devaroo embadu aatana hesaru.
Amos 4:12 in English
- King James Version (KJV)
- Therefore thus will I do unto thee, O Israel: [and] because I will do this unto thee, prepare to meet thy God, O Israel.
- World English Bible (WEB)
- “Therefore I will do this to you, Israel; because I will do this to you, prepare to meet your God, Israel.
- American Standard Version (ASV)
- Therefore thus will I do unto thee, O Israel; [and] because I will do this unto thee, prepare to meet thy God, O Israel.
- Bible in Basic English (BBE)
- So this is what I will do to you, O Israel: and because I will do this to you, be ready for a meeting with your God, O Israel.
- Darby Translation (DBY)
- Therefore thus will I do unto thee, O Israel: because I will do this unto thee, prepare to meet thy God, O Israel.
- Webster's Bible (WBS)
- Therefore thus will I do to thee, O Israel: [and] because I will do this to thee, prepare to meet thy God, O Israel.
- Young's Literal Translation (YLT)
- Therefore, thus I do to thee, O Israel, at last, Because this I do to thee, Prepare to meet thy God, O Israel.
Read in context
- 10ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- 11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- 12ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- 13ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
Cross references
- 1 Thessalonians 5:2–4 1 ಥೆಸಲೊನೀಕದವರಿಗೆ 5:2–4ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
- James 4:1–10 ಯಾಕೋಬನು 4:1–10ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ. ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ. ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Amos 9:1–4 ಆಮೋಸ 9:1–4ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Mark 13:32–37 ಮಾರ್ಕನು 13:32–37ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು. ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು. ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು. ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- Ezekiel 13:5 ಯೆಹೆಜ್ಕೇಲನು 13:5ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
- Luke 21:3–36 ಲೂಕನು 21:3–36ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ; ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು. ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು-- ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು. ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು. ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ. ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು. ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು. ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು. ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು. ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು. ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು. ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ. ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು. ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು; ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು. ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ; ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ. ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ. ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ. ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು. ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Isaiah 47:3 ಯೆಶಾಯ 47:3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- Amos 5:4–15 ಆಮೋಸ 5:4–15ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ. ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು. ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ. ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ, ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ. ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ. ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ. ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು. ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ. ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ. ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Luke 14:31–32 ಲೂಕನು 14:31–32ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- Matthew 5:25 ಮತ್ತಾಯನು 5:25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
- Hosea 13:8 ಹೋಶೇಯ 13:8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.