Amos · chapter 4 · verse 6
Amos 4:6 in Kannada
ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
Naanu saha nimage ellaa pattanagalalli hallige enoo sikkadante nimma ellaa sthalagalalli rottiya korateyannu kottiddene; aadaroo neevu nanna kadege hintirugikollalilla endu kartanu helu ttaane.
Amos 4:6 in English
- King James Version (KJV)
- And I also have given you cleanness of teeth in all your cities, and want of bread in all your places: yet have ye not returned unto me, saith the LORD.
- World English Bible (WEB)
- “I also have given you cleanness of teeth in all your cities, and lack of bread in every town; yet you haven’t returned to me,” says the LORD.
- American Standard Version (ASV)
- And I also have given you cleanness of teeth in all your cities, and want of bread in all your places; yet have ye not returned unto me, saith Jehovah.
- Bible in Basic English (BBE)
- But in all your towns I have kept food from your teeth, and in all your places there has been need of bread: and still you have not come back to me, says the Lord.
- Darby Translation (DBY)
- And I also have given you cleanness of teeth in all your cities, and want of bread in all your places; yet ye have not returned unto me, saith Jehovah.
- Webster's Bible (WBS)
- And I also have given you cleanness of teeth in all your cities, and want of bread in all your places: yet have ye not returned to me, saith the LORD.
- Young's Literal Translation (YLT)
- And I also — I have given to you cleanness of teeth in all your cities, And lack of bread in all your places, And ye have not turned back unto Me, an affirmation of Jehovah.
Read in context
- 4ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ.
- 5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
- 6ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
- 7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- 8ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Cross references
- Haggai 2:17 ಹಗ್ಗಾಯ 2:17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Isaiah 9:13 ಯೆಶಾಯ 9:13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- Revelation 16:10–11 ಪ್ರಕಟನೆ 16:10–11ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Revelation 2:21 ಪ್ರಕಟನೆ 2:21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- Hosea 7:14–16 ಹೋಶೇಯ 7:14–16ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ. ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ. ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- 2 Kings 6:25–29 2 ಅರಸುಗಳು 6:25–29ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು. ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- Ezekiel 16:27 ಯೆಹೆಜ್ಕೇಲನು 16:27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
- 1 Kings 18:2 1 ಅರಸುಗಳು 18:2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.