Amos · chapter 5 · verse 14
Amos 5:14 in Kannada
ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
Neevu badukuva haageyoo neevu heluva prakaara sainyaadhipatiyaada kartanu, nimma sangada iruva haageyoo kettaddannu bittu olleya dannu hudukiri.
Amos 5:14 in English
- King James Version (KJV)
- Seek good, and not evil, that ye may live: and so the LORD, the God of hosts, shall be with you, as ye have spoken.
- World English Bible (WEB)
- Seek good, and not evil, that you may live; and so the LORD, the God of Armies, will be with you, as you say.
- American Standard Version (ASV)
- Seek good, and not evil, that ye may live; and so Jehovah, the God of hosts, will be with you, as ye say.
- Bible in Basic English (BBE)
- Go after good and not evil, so that life may be yours: and so the Lord, the God of armies, will be with you, as you say.
- Darby Translation (DBY)
- Seek good, and not evil, that ye may live; and so Jehovah, the God of hosts, shall be with you, as ye say.
- Webster's Bible (WBS)
- Seek good, and not evil, that ye may live: and so the LORD, the God of hosts, shall be with you, as ye have spoken.
- Young's Literal Translation (YLT)
- Seek good, and not evil, that ye may live, And it is so; Jehovah, God of Hosts, [is] with you, as ye said.
Read in context
- 12ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- 13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- 14ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
- 15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- 16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
Cross references
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Philippians 4:8–9 ಫಿಲಿಪ್ಪಿಯವರಿಗೆ 4:8–9ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Genesis 39:2–3 ಆದಿಕಾಂಡ 39:2–3ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
- Isaiah 48:1–2 ಯೆಶಾಯ 48:1–2ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ. ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Romans 2:7–9 ರೋಮಾಪುರದವರಿಗೆ 2:7–9ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Psalm 34:12–16 ಕೀರ್ತನೆಗಳು 34:12–16ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ. ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು. ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Jeremiah 7:3–4 ಯೆರೆಮೀಯ 7:3–4ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು. ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.