Amos · chapter 5 · verse 24
Amos 5:24 in Kannada
ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
Aadare nyaayavu neerinanteyoo neetiyu balavaada pravaahadanteyoo hariyali.
Amos 5:24 in English
- King James Version (KJV)
- But let judgment run down as waters, and righteousness as a mighty stream.
- World English Bible (WEB)
- But let justice roll on like rivers, and righteousness like a mighty stream.
- American Standard Version (ASV)
- But let justice roll down as waters, and righteousness as a mighty stream.
- Bible in Basic English (BBE)
- But let the right go rolling on like waters, and righteousness like an ever-flowing stream.
- Darby Translation (DBY)
- but let judgment roll down as waters, and righteousness as an ever-flowing stream.
- Webster's Bible (WBS)
- But let judgment run down as waters, and righteousness as a mighty stream.
- Young's Literal Translation (YLT)
- And roll on as waters doth judgment, And righteousness as a perennial stream.
Read in context
- 22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- 23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- 24ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
- 25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
- 26ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
Cross references
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Proverbs 21:3 ಜ್ಞಾನೋಕ್ತಿಗಳು 21:3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- Hosea 6:6 ಹೋಶೇಯ 6:6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
- Mark 12:32–34 ಮಾರ್ಕನು 12:32–34ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- Amos 5:14–15 ಆಮೋಸ 5:14–15ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ. ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Job 29:12–17 ಯೋಬನು 29:12–17ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Amos 5:7 ಆಮೋಸ 5:7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,