Amos · chapter 5 · verse 25
Amos 5:25 in Kannada
ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
O israayelina manetanadavare, neevu nanage aranya dalli nalavattu varushagalu baligalannoo kaanike galannoo arpisidiro?
Amos 5:25 in English
- King James Version (KJV)
- Have ye offered unto me sacrifices and offerings in the wilderness forty years, O house of Israel?
- World English Bible (WEB)
- “Did you bring to me sacrifices and offerings in the wilderness forty years, house of Israel?
- American Standard Version (ASV)
- Did ye bring unto me sacrifices and offerings in the wilderness forty years, O house of Israel?
- Bible in Basic English (BBE)
- Did you come to me with offerings of beasts and meal offerings in the waste land for forty years, O Israel?
- Darby Translation (DBY)
- Did ye bring unto me sacrifices and oblations in the wilderness forty years, O house of Israel?
- Webster's Bible (WBS)
- Have ye offered to me sacrifices and offerings in the wilderness forty years, O house of Israel?
- Young's Literal Translation (YLT)
- Sacrifices and offering did ye bring nigh to Me, In a wilderness forty years, O house of Israel?
Read in context
- 23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- 24ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
- 25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
- 26ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- 27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
Cross references
- Acts 7:42–43 ಅಪೊಸ್ತಲರ ಕೃತ್ಯಗಳು 7:42–43ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
- Ezekiel 20:8 ಯೆಹೆಜ್ಕೇಲನು 20:8ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
- Nehemiah 9:18 ನೆಹೆಮೀಯ 9:18ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
- Nehemiah 9:21 ನೆಹೆಮೀಯ 9:21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- Leviticus 17:7 ಯಾಜಕಕಾಂಡ 17:7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- Ezekiel 20:16 ಯೆಹೆಜ್ಕೇಲನು 20:16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
- Joshua 24:14 ಯೆಹೋಶುವ 24:14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
- Ezekiel 20:24 ಯೆಹೆಜ್ಕೇಲನು 20:24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- Deuteronomy 32:17–19 ಧರ್ಮೋಪದೇಶಕಾಂಡ 32:17–19ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- Hosea 9:9–10 ಹೋಶೇಯ 9:9–10ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು. ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
- Zechariah 7:5 ಜೆಕರ್ಯ 7:5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- Isaiah 43:23–24 ಯೆಶಾಯ 43:23–24ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ. ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.