Amos · chapter 5 · verse 4
Amos 5:4 in Kannada
ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
Kartanu israayelina maneyavarige heege heluttaane--neevu nannannu huduki jeevisiri.
Amos 5:4 in English
- King James Version (KJV)
- For thus saith the LORD unto the house of Israel, Seek ye me, and ye shall live:
- World English Bible (WEB)
- For the LORD says to the house of Israel: “Seek me, and you will live;
- American Standard Version (ASV)
- For thus saith Jehovah unto the house of Israel, Seek ye me, and ye shall live;
- Bible in Basic English (BBE)
- For these are the words of the Lord to the children of Israel: Let your hearts be turned to me, so that you may have life:
- Darby Translation (DBY)
- For thus saith Jehovah unto the house of Israel: Seek ye me, and ye shall live.
- Webster's Bible (WBS)
- For thus saith the LORD to the house of Israel, Seek ye me, and ye shall live:
- Young's Literal Translation (YLT)
- For thus said Jehovah to the house of Israel: Seek ye Me, and live,
Read in context
- 2ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
- 3ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.
- 4ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
- 5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- 6ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
Cross references
- Zephaniah 2:3 ಚೆಫನ್ಯ 2:3ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
- Jeremiah 29:12–13 ಯೆರೆಮೀಯ 29:12–13ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- Psalm 14:2 ಕೀರ್ತನೆಗಳು 14:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Matthew 7:8 ಮತ್ತಾಯನು 7:8ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- Psalm 105:3–4 ಕೀರ್ತನೆಗಳು 105:3–4ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Deuteronomy 30:1–8 ಧರ್ಮೋಪದೇಶಕಾಂಡ 30:1–8ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು. ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು. ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು. ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು. ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.
- 2 Chronicles 20:3 2 ಪೂರ್ವಕಾಲವೃತ್ತಾಂತ 20:3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.