Amos · chapter 5 · verse 6
Amos 5:6 in Kannada
ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
Neevu kartanannu huduki badukiri, illadiddare aatanu benkiyante yosephana manetanadalli praveshisuvanu; adu nungibiduvadu, adannu aarisuvavaru betelinalli yaaroo iruvadilla.
Amos 5:6 in English
- King James Version (KJV)
- Seek the LORD, and ye shall live; lest he break out like fire in the house of Joseph, and devour [it], and [there be] none to quench [it] in Beth-el.
- World English Bible (WEB)
- Seek the LORD, and you will live, lest he break out like fire in the house of Joseph, and it devour, and there be no one to quench it in Bethel.
- American Standard Version (ASV)
- Seek Jehovah, and ye shall live; lest he break out like fire in the house of Joseph, and it devour, and there be none to quench it in Beth-el.
- Bible in Basic English (BBE)
- Go to the Lord for help so that you may have life; for fear that he may come like fire bursting out in the family of Joseph, causing destruction, and there will be no one to put it out in Beth-el.
- Darby Translation (DBY)
- Seek Jehovah, and ye shall live; lest he break out like fire in the house of Joseph, and devour [it], and there be none to quench [it] in Bethel.
- Webster's Bible (WBS)
- Seek the LORD, and ye shall live; lest he break out like fire in the house of Joseph, and devour [it] , and [there be] none to quench [it] in Beth-el.
- Young's Literal Translation (YLT)
- Seek ye Jehovah, and live, Lest He prosper as fire [against] the house of Joseph, And it hath consumed, And there is no quencher for Beth-El.
Read in context
- 4ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
- 5ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- 6ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
- 7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- 8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
Cross references
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- Zechariah 10:6 ಜೆಕರ್ಯ 10:6ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
- Mark 9:43–48 ಮಾರ್ಕನು 9:43–48ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- Genesis 48:8–20 ಆದಿಕಾಂಡ 48:8–20ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು. ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು. ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು. ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- Amos 5:4 ಆಮೋಸ 5:4ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
- Amos 5:14 ಆಮೋಸ 5:14ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
- 2 Samuel 19:20 2 ಸಮುವೇಲನು 19:20ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
- 1 Kings 11:28 1 ಅರಸುಗಳು 11:28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.