Amos · chapter 8 · verse 12
Amos 8:12 in Kannada
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
Aaga avaru samudradinda samudrakkoo uttara dinda poorvakkoo aledu kartana vaakyavannu hudukuvadakke attitta odaadi adannu kaanade hoguvaru.
Amos 8:12 in English
- King James Version (KJV)
- And they shall wander from sea to sea, and from the north even to the east, they shall run to and fro to seek the word of the LORD, and shall not find [it].
- World English Bible (WEB)
- They will wander from sea to sea, and from the north even to the east; they will run back and forth to seek the LORD’s word, and will not find it.
- American Standard Version (ASV)
- And they shall wander from sea to sea, and from the north even to the east; they shall run to and fro to seek the word of Jehovah, and shall not find it.
- Bible in Basic English (BBE)
- And they will go wandering from sea to sea, and from the north even to the east, running here and there in search of the word of the Lord, and they will not get it.
- Darby Translation (DBY)
- And they shall wander from sea to sea, and from the north to the east; they shall run to and fro to seek the word of Jehovah, and shall not find it.
- Webster's Bible (WBS)
- And they shall wander from sea to sea, and from the north even to the east, they shall run to and fro to seek the word of the LORD, and shall not find [it] .
- Young's Literal Translation (YLT)
- And they have wandered from sea unto sea, And from north even unto east, They go to and fro to seek the word of Jehovah, And they do not find.
Read in context
- 10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- 11ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
- 12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
- 13ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- 14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
Cross references
- Romans 11:7–10 ರೋಮಾಪುರದವರಿಗೆ 11:7–10ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು. (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- 2 Timothy 3:6–7 2 ತಿಮೊಥೆಯನಿಗೆ 3:6–7ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ. ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
- Proverbs 14:6 ಜ್ಞಾನೋಕ್ತಿಗಳು 14:6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- Matthew 12:30 ಮತ್ತಾಯನು 12:30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Matthew 24:23–26 ಮತ್ತಾಯನು 24:23–26ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ. ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು. ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ. ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
- Romans 9:31–33 ರೋಮಾಪುರದವರಿಗೆ 9:31–33ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ. ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.