Amos · chapter 9 · verse 12
Amos 9:12 in Kannada
ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
Aaga avaru edo mina mikkabhaagavannoo nanna hesarininda kareyalpa duva ellaa anyajanaangagalannoo svaadheenamaadi kolluvarendu idannu maaduvavanaada kartanu heluttaane.
Amos 9:12 in English
- King James Version (KJV)
- That they may possess the remnant of Edom, and of all the heathen, which are called by my name, saith the LORD that doeth this.
- World English Bible (WEB)
- that they may possess the remnant of Edom and all the nations who are called by my name,” says the LORD who does this.
- American Standard Version (ASV)
- that they may possess the remnant of Edom, and all the nations that are called by my name, saith Jehovah that doeth this.
- Bible in Basic English (BBE)
- So that the rest of Edom may be their heritage, and all the nations who have been named by my name, says the Lord, who is doing this.
- Darby Translation (DBY)
- that they may possess the remnant of Edom, and all the nations upon whom my name is called, saith Jehovah who doeth this.
- Webster's Bible (WBS)
- That they may possess the remnant of Edom, and of all the heathen, who are called by my name, saith the LORD that doeth this.
- Young's Literal Translation (YLT)
- So that they possess the remnant of Edom, And all the nations on whom My name is called, An affirmation of Jehovah — doer of this.
Read in context
- 10ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.
- 11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- 12ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
- 13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
- 14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Cross references
- Isaiah 43:7 ಯೆಶಾಯ 43:7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- Acts 15:17 ಅಪೊಸ್ತಲರ ಕೃತ್ಯಗಳು 15:17ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- Daniel 9:18–19 ದಾನಿಯೇಲನು 9:18–19ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Jeremiah 14:9 ಯೆರೆಮೀಯ 14:9ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
- Isaiah 63:19 ಯೆಶಾಯ 63:19ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- Isaiah 14:1–2 ಯೆಶಾಯ 14:1–2ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- Numbers 24:17–18 ಅರಣ್ಯಕಾಂಡ 24:17–18ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Joel 3:8 ಯೋವೇಲ 3:8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Psalm 60:8 ಕೀರ್ತನೆಗಳು 60:8ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.