Amos · chapter 9 · verse 4
Amos 9:4 in Kannada
ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
Avaru tamma shatrugala munde serege hodaroo alliyoo naanu kattige appane koduvenu; adu avarannu kolluvadu. Meligaagi alla, kedigaagi avara mele nanna drushtiyiduvenu.
Amos 9:4 in English
- King James Version (KJV)
- And though they go into captivity before their enemies, thence will I command the sword, and it shall slay them: and I will set mine eyes upon them for evil, and not for good.
- World English Bible (WEB)
- Though they go into captivity before their enemies, there I will command the sword, and it will kill them. I will set my eyes on them for evil, and not for good.
- American Standard Version (ASV)
- And though they go into captivity before their enemies, thence will I command the sword, and it shall slay them: and I will set mine eyes upon them for evil, and not for good.
- Bible in Basic English (BBE)
- And though they are taken away as prisoners by their attackers, even there will I give orders to the sword to put them to death: my eyes will be fixed on them for evil and not for good.
- Darby Translation (DBY)
- and though they go into captivity before their enemies, there will I command the sword, and it shall slay them: and I will set mine eyes upon them for evil, and not for good.
- Webster's Bible (WBS)
- And though they go into captivity before their enemies, thence will I command the sword, and it shall slay them: and I will set my eyes upon them for evil, and not for good.
- Young's Literal Translation (YLT)
- And if they go into captivity before their enemies, From thence I command the sword, And it hath slain them, And I have set Mine eye on them for evil, And not for good.
Read in context
- 2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- 3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- 4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- 5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
- 6ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
Cross references
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Jeremiah 44:11 ಯೆರೆಮೀಯ 44:11ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
- Jeremiah 21:10 ಯೆರೆಮೀಯ 21:10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Jeremiah 39:16 ಯೆರೆಮೀಯ 39:16ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Deuteronomy 28:63–65 ಧರ್ಮೋಪದೇಶಕಾಂಡ 28:63–65ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Leviticus 26:36–39 ಯಾಜಕಕಾಂಡ 26:36–39ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- Jeremiah 24:6 ಯೆರೆಮೀಯ 24:6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
- Ezekiel 5:2 ಯೆಹೆಜ್ಕೇಲನು 5:2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
- Psalm 34:15–16 ಕೀರ್ತನೆಗಳು 34:15–16ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.