Colossians · chapter 2 · verse 15
Colossians 2:15 in Kannada
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
Aatanu doretanagalannoo adhikaara galannoo kedisi shilubeyalli avugala mele vijaya gondu avugalannu bahirangavaagi torisidanu.
Colossians 2:15 in English
- King James Version (KJV)
- [And] having spoiled principalities and powers, he made a shew of them openly, triumphing over them in it.
- World English Bible (WEB)
- Having stripped the principalities and the powers, he made a show of them openly, triumphing over them in it.
- American Standard Version (ASV)
- having despoiled the principalities and the powers, he made a show of them openly, triumphing over them in it.
- Bible in Basic English (BBE)
- Having made himself free from the rule of authorities and powers, he put them openly to shame, glorying over them in it.
- Darby Translation (DBY)
- having spoiled principalities and authorities, he made a show of them publicly, leading them in triumph by it.
- Webster's Bible (WBS)
- [And] having despoiled principalities and powers, he made a show of them openly, triumphing over them in it.
- Young's Literal Translation (YLT)
- having stripped the principalities and the authorities, he made a shew of them openly — having triumphed over them in it.
Read in context
- 13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- 14ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
- 15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- 16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
- 17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
Cross references
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- Ephesians 4:8 ಎಫೆಸದವರಿಗೆ 4:8ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
- Matthew 12:29 ಮತ್ತಾಯನು 12:29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
- John 12:31–32 ಯೋಹಾನನು 12:31–32ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು. ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Ephesians 6:12 ಎಫೆಸದವರಿಗೆ 6:12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- Luke 10:18 ಲೂಕನು 10:18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
- John 16:11 ಯೋಹಾನನು 16:11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- Isaiah 49:24–25 ಯೆಶಾಯ 49:24–25ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Acts 2:32–36 ಅಪೊಸ್ತಲರ ಕೃತ್ಯಗಳು 2:32–36ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.