Colossians · chapter 2 · verse 17
Colossians 2:17 in Kannada
ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
Ivu barabekaagiddavugala chhaaye yaagive; aadare shareeravu kristanade.
Colossians 2:17 in English
- King James Version (KJV)
- Which are a shadow of things to come; but the body [is] of Christ.
- World English Bible (WEB)
- which are a shadow of the things to come; but the body is Christ’s.
- American Standard Version (ASV)
- which are a shadow of the things to come; but the body is Christ’s.
- Bible in Basic English (BBE)
- For these are an image of the things which are to come; but the body is Christ's.
- Darby Translation (DBY)
- which are a shadow of things to come; but the body [is] of Christ.
- Webster's Bible (WBS)
- Which are a shadow of things to come; but the body [is] of Christ.
- Young's Literal Translation (YLT)
- which are a shadow of the coming things, and the body [is] of the Christ;
Read in context
- 15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- 16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
- 17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- 18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- 19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
Cross references
- Hebrews 10:1 ಇಬ್ರಿಯರಿಗೆ 10:1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Hebrews 9:9 ಇಬ್ರಿಯರಿಗೆ 9:9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- Hebrews 4:1–11 ಇಬ್ರಿಯರಿಗೆ 4:1–11ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ. ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ. ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ. ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ. ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ. ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ. ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು. ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- Matthew 11:28–29 ಮತ್ತಾಯನು 11:28–29ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.