Colossians · chapter 3 · verse 9
Colossians 3:9 in Kannada
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
Obbarigobbaru sullaadabediri; neevu hale manushyanannu avana krutyagala kooda tegeduhaakiddeerallave?
Colossians 3:9 in English
- King James Version (KJV)
- Lie not one to another, seeing that ye have put off the old man with his deeds;
- World English Bible (WEB)
- Don’t lie to one another, seeing that you have put off the old man with his doings,
- American Standard Version (ASV)
- lie not one to another; seeing that ye have put off the old man with his doings,
- Bible in Basic English (BBE)
- Do not make false statements to one another; because you have put away the old man with all his doings,
- Darby Translation (DBY)
- Do not lie to one another, having put off the old man with his deeds,
- Webster's Bible (WBS)
- Lie not one to another, seeing ye have put off the old man with his deeds;
- Young's Literal Translation (YLT)
- Lie not one to another, having put off the old man with his practices,
Read in context
- 7ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
- 8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- 9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
- 10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- 11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
Cross references
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- Leviticus 19:11 ಯಾಜಕಕಾಂಡ 19:11ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
- Romans 6:6 ರೋಮಾಪುರದವರಿಗೆ 6:6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Zephaniah 3:13 ಚೆಫನ್ಯ 3:13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Jeremiah 9:3–5 ಯೆರೆಮೀಯ 9:3–5ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- Titus 1:12–13 ತೀತನಿಗೆ 1:12–13ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು. ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.