Daniel · chapter 11 · verse 31
Daniel 11:31 in Kannada
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
Avanu koodisuva sainyavu aashraya durgavaada pavitraalayavannu holegedisi, nitya yajnyavannu neegisi, haalu maaduva asahyavaadavugalannu pratishthisuvadu.
Daniel 11:31 in English
- King James Version (KJV)
- And arms shall stand on his part, and they shall pollute the sanctuary of strength, and shall take away the daily [sacrifice], and they shall place the abomination that maketh desolate.
- World English Bible (WEB)
- “Forces from him will profane the sanctuary, even the fortress, and will take away the continual burnt offering. Then they will set up the abomination that makes desolate.
- American Standard Version (ASV)
- And forces shall stand on his part, and they shall profane the sanctuary, even the fortress, and shall take away the continual [burnt-offering], and they shall set up the abomination that maketh desolate.
- Bible in Basic English (BBE)
- And armies sent by him will take up their position and they will make unclean the holy place, even the strong place, and take away the regular burned offering and put in its place an unclean thing causing fear.
- Darby Translation (DBY)
- And forces shall stand on his part, and they shall profane the sanctuary, the fortress, and shall take away the continual [sacrifice], and they shall place the abomination that maketh desolate.
- Webster's Bible (WBS)
- And arms shall stand on his part, and they shall pollute the sanctuary of strength, and shall take away the daily [sacrifice] , and they shall place the abomination that maketh desolate.
- Young's Literal Translation (YLT)
- And strong ones out of him stand up, and have polluted the sanctuary, the stronghold, and have turned aside the continual [sacrifice], and appointed the desolating abomination.
Read in context
- 29ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.
- 30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
- 31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- 32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
- 33ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
Cross references
- Daniel 12:11 ದಾನಿಯೇಲನು 12:11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Daniel 8:11–13 ದಾನಿಯೇಲನು 8:11–13ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು. ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
- Luke 21:20 ಲೂಕನು 21:20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- Acts 13:40–41 ಅಪೊಸ್ತಲರ ಕೃತ್ಯಗಳು 13:40–41ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Revelation 17:12 ಪ್ರಕಟನೆ 17:12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
- Ezekiel 24:21–22 ಯೆಹೆಜ್ಕೇಲನು 24:21–22ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
- Daniel 8:24 ದಾನಿಯೇಲನು 8:24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Daniel 8:26 ದಾನಿಯೇಲನು 8:26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.