Daniel · chapter 11 · verse 32
Daniel 11:32 in Kannada
ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
Odambadikege virodhavaagi kettavaraagi nade yuvavarannu vyarthavaada maatugalinda kedi suvanu; aadare tamma devarannu ariyuva janaru drudhachittaraagi krutaartharaaguvaru.
Daniel 11:32 in English
- King James Version (KJV)
- And such as do wickedly against the covenant shall he corrupt by flatteries: but the people that do know their God shall be strong, and do [exploits].
- World English Bible (WEB)
- He will corrupt those who do wickedly against the covenant by flatteries; but the people who know their God will be strong and take action.
- American Standard Version (ASV)
- And such as do wickedly against the covenant shall he pervert by flatteries; but the people that know their God shall be strong, and do [exploits].
- Bible in Basic English (BBE)
- And those who do evil against the agreement will be turned to sin by his fair words: but the people who have knowledge of their God will be strong and do well.
- Darby Translation (DBY)
- And such as do wickedly against the covenant shall he pervert by flatteries; but the people that know their God shall be strong, and shall act.
- Webster's Bible (WBS)
- And such as do wickedly against the covenant shall he corrupt by flatteries: but the people that know their God shall be strong, and do [exploits] .
- Young's Literal Translation (YLT)
- And those acting wickedly [against] the covenant, he defileth by flatteries; and the people knowing their God are strong, and have wrought.
Read in context
- 30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
- 31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- 32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
- 33ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
- 34ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
Cross references
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- Zechariah 10:12 ಜೆಕರ್ಯ 10:12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Micah 5:7–9 ಮೀಕ 5:7–9ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ. ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು. ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
- 2 Timothy 2:1–3 2 ತಿಮೊಥೆಯನಿಗೆ 2:1–3ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು. ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 1 John 2:3–4 1 ಯೋಹಾನನು 2:3–4ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- Zechariah 9:13–16 ಜೆಕರ್ಯ 9:13–16ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ. ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು. ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು. ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- Zechariah 12:3–7 ಜೆಕರ್ಯ 12:3–7ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು. ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು. ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು. ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
- Zechariah 10:3–6 ಜೆಕರ್ಯ 10:3–6ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ. ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ. ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು. ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Hebrews 10:32–33 ಇಬ್ರಿಯರಿಗೆ 10:32–33ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.