Daniel · chapter 11 · verse 41
Daniel 11:41 in Kannada
ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
Idallade avanu ramyavaada deshadolakkoo nugguvanu; aneka deshagalu kedavalpaduvavu; aadare edomu, movaabu ammonana makkalalli mukhyastharu aatana kaiyinda tappisikolluvaru.
Daniel 11:41 in English
- King James Version (KJV)
- He shall enter also into the glorious land, and many [countries] shall be overthrown: but these shall escape out of his hand, [even] Edom, and Moab, and the chief of the children of Ammon.
- World English Bible (WEB)
- He will enter also into the glorious land, and many countries will be overthrown; but these will be delivered out of his hand: Edom, Moab, and the chief of the children of Ammon.
- American Standard Version (ASV)
- He shall enter also into the glorious land, and many [countries] shall be overthrown; but these shall be delivered out of his hand: Edom, and Moab, and the chief of the children of Ammon.
- Bible in Basic English (BBE)
- And he will come into the beautiful land, and tens of thousands will be overcome: but these will be kept from falling into his hands: Edom and Moab and the chief of the children of Ammon.
- Darby Translation (DBY)
- And he shall enter into the land of beauty, and many [countries] shall be overthrown; but these shall escape out of his hand: Edom, and Moab, and the chief of the children of Ammon.
- Webster's Bible (WBS)
- He shall enter also into the glorious land, and many [countries] shall be overthrown: but these shall escape out of his hand, [even] Edom, and Moab, and the chief of the children of Ammon.
- Young's Literal Translation (YLT)
- and hath come into the desirable land, and many do stumble, and these escape from his hand: Edom, and Moab, and the chief of the sons of Ammon.
Read in context
- 39ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
- 40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- 41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
- 42ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
- 43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
Cross references
- Jeremiah 48:47 ಯೆರೆಮೀಯ 48:47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Jeremiah 49:6 ಯೆರೆಮೀಯ 49:6ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Daniel 11:16 ದಾನಿಯೇಲನು 11:16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
- Jeremiah 9:26 ಯೆರೆಮೀಯ 9:26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Daniel 8:9 ದಾನಿಯೇಲನು 8:9ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
- Ezekiel 38:8–13 ಯೆಹೆಜ್ಕೇಲನು 38:8–13ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ. ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ. ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
- Daniel 11:45 ದಾನಿಯೇಲನು 11:45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Isaiah 11:13–15 ಯೆಶಾಯ 11:13–15ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.