Daniel · chapter 2 · verse 22
Daniel 2:22 in Kannada
ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
Agaadhavaadavugalannu, rahasyavaadavu galannu prakatamaaduttaane; kattaleyalli iruvanta vugalannu tilidiruvantavanaagiddaane; belaku aata nolage vaasisuttade.
Daniel 2:22 in English
- King James Version (KJV)
- He revealeth the deep and secret things: he knoweth what [is] in the darkness, and the light dwelleth with him.
- World English Bible (WEB)
- He reveals the deep and secret things. He knows what is in the darkness, and the light dwells with him.
- American Standard Version (ASV)
- he revealeth the deep and secret things; he knoweth what is in the darkness, and the light dwelleth with him.
- Bible in Basic English (BBE)
- He is the unveiler of deep and secret things: he has knowledge of what is in the dark, and the light has its living-place with him.
- Darby Translation (DBY)
- It is he that revealeth the deep and secret things; He knoweth what is in the darkness, and the light dwelleth with him.
- Webster's Bible (WBS)
- He revealeth the deep and secret things: he knoweth what [is] in the darkness, and the light dwelleth with him.
- Young's Literal Translation (YLT)
- He is revealing deep and hidden things; He hath known what [is] in darkness, and light with Him hath dwelt.
Read in context
- 20ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
- 21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- 22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
- 23ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
- 24ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.
Cross references
- Job 12:22 ಯೋಬನು 12:22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
- 1 John 1:5 1 ಯೋಹಾನನು 1:5ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Psalm 139:11–12 ಕೀರ್ತನೆಗಳು 139:11–12ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Daniel 5:11 ದಾನಿಯೇಲನು 5:11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- Luke 12:2–3 ಲೂಕನು 12:2–3ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ. ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- 1 Corinthians 2:9–11 1 ಕೊರಿಂಥದವರಿಗೆ 2:9–11ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ. ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ. ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
- Psalm 36:9 ಕೀರ್ತನೆಗಳು 36:9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.