Daniel · chapter 2 · verse 40
Daniel 2:40 in Kannada
ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
Naalkane raajyavu kabbi nada haage balavaagi iruvadu. Kabbinavu samasta vastugalannu vashamaadikondu chooru chooru maaduttade; kabbinavu hege ellavugalannu chooru maaduvado haageye aa raajyavu chooru chooraagi dhvansa maaduvadu.
Daniel 2:40 in English
- King James Version (KJV)
- And the fourth kingdom shall be strong as iron: forasmuch as iron breaketh in pieces and subdueth all [things:] and as iron that breaketh all these, shall it break in pieces and bruise.
- World English Bible (WEB)
- The fourth kingdom will be strong as iron, because iron breaks in pieces and subdues all things; and as iron that crushes all these, it will break in pieces and crush.
- American Standard Version (ASV)
- And the fourth kingdom shall be strong as iron, forasmuch as iron breaketh in pieces and subdueth all things; and as iron that crusheth all these, shall it break in pieces and crush.
- Bible in Basic English (BBE)
- And the fourth kingdom will be strong as iron: because, as all things are broken and overcome by iron, so it will have the power of crushing and smashing down all the earth.
- Darby Translation (DBY)
- And the fourth kingdom shall be strong as iron: forasmuch as iron breaketh in pieces and subdueth everything, and as iron that breaketh all these, so shall it break in pieces and bruise.
- Webster's Bible (WBS)
- And the fourth kingdom shall be strong as iron: forasmuch as iron breaketh in pieces and subdueth all [things] : and as iron that breaketh all these, shall it break in pieces and bruise.
- Young's Literal Translation (YLT)
- And the fourth kingdom is strong as iron, because that iron is breaking small, and making feeble, all [things], even as iron that is breaking all these, it beateth small and breaketh.
Read in context
- 38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- 39ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.
- 40ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
- 41ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
- 42ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.
Cross references
- Daniel 7:7 ದಾನಿಯೇಲನು 7:7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Daniel 7:19–26 ದಾನಿಯೇಲನು 7:19–26ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ. ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು. ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು; ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು. ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು. ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- Daniel 11:36–45 ದಾನಿಯೇಲನು 11:36–45ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು. ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ. ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು. ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು. ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು. ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು. ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು. ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು. ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು. ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Daniel 9:26 ದಾನಿಯೇಲನು 9:26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Amos 1:3 ಆಮೋಸ 1:3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
- John 11:48 ಯೋಹಾನನು 11:48ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- Daniel 2:33 ದಾನಿಯೇಲನು 2:33ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
- Daniel 8:24 ದಾನಿಯೇಲನು 8:24ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- Jeremiah 15:12 ಯೆರೆಮೀಯ 15:12ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
Original words (Hebrew)
- fourth · H7244רְבִיעַי rᵉbîyʻay
- kingdom · H4437מַלְכוּ malkûw
- be · H1934הָוָא hâvâʼ
- strong · H8624תַּקִּיף taqqîyph
- iron · H6523פַּרְזֶל parzel
- iron · H6523פַּרְזֶל parzel
- pieces · H1855דְּקַק dᵉqaq
- subdueth · H2827חֲשַׁל chăshal
- all · H3606כֹּל kôl
- as · H6903קְבֵל qᵉbêl
- iron · H6523פַּרְזֶל parzel
- breaketh · H7490רְעַע rᵉʻaʻ
- all · H3606כֹּל kôl
- these · H459אִלֵּין ʼillêyn
- pieces · H1855דְּקַק dᵉqaq
- bruise · H7490רְעַע rᵉʻaʻ