Daniel · chapter 5 · verse 26
Daniel 5:26 in Kannada
ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
Idara arthavu heegide--mene andare devaru ninna aalvikeya kaalavannu lekkisi kone gaanisiddaane;
Daniel 5:26 in English
- King James Version (KJV)
- This [is] the interpretation of the thing: MENE; God hath numbered thy kingdom, and finished it.
- World English Bible (WEB)
- “This is the interpretation of the thing: MENE: God has counted your kingdom, and brought it to an end.
- American Standard Version (ASV)
- This is the interpretation of the thing: MENE; God hath numbered thy kingdom, and brought it to an end.
- Bible in Basic English (BBE)
- This is the sense of the words: Mene; your kingdom has been numbered by God and ended.
- Darby Translation (DBY)
- This is the interpretation of the thing: MENE, God hath numbered thy kingdom, and finished it;
- Webster's Bible (WBS)
- This [is] the interpretation of the thing: MENE; God hath numbered thy kingdom, and finished it.
- Young's Literal Translation (YLT)
- This [is] the interpretation of the thing: Numbered — God hath numbered thy kingdom, and hath finished it.
Read in context
- 24ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
- 25ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್,
- 26ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ;
- 27ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
- 28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
Cross references
- Isaiah 47:1–15 ಯೆಶಾಯ 47:1–15ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ. ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು. ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು. ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು. ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ. ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ. ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು. ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು. ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Jeremiah 27:7 ಯೆರೆಮೀಯ 27:7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Jeremiah 25:11–12 ಯೆರೆಮೀಯ 25:11–12ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು. ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Isaiah 21:1–10 ಯೆಶಾಯ 21:1–10ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ. ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ. ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ. ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು. ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
- Isaiah 13:1–14 ಯೆಶಾಯ 13:1–14ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ. ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ. ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು. ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು. ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ. ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು. ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು. ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು. ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
- Daniel 9:2 ದಾನಿಯೇಲನು 9:2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
- Acts 15:18 ಅಪೊಸ್ತಲರ ಕೃತ್ಯಗಳು 15:18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
- Job 14:14 ಯೋಬನು 14:14ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- Jeremiah 50:1–46 ಯೆರೆಮೀಯ 50:1–46ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು. ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ; ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು. ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು. ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು. ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ. ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು. ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ. ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ. ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು. ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ. ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು. ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ. ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ. ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು. ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು! ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ; ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು. ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ. ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು. ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು. ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.