Daniel · chapter 5 · verse 4
Daniel 5:4 in Kannada
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
Avaru draakshaarasavannu kudidu bangaara, belli, kanchu, kabbina, mara mattu kallina devarugalannu hogalatodagidaru.
Daniel 5:4 in English
- King James Version (KJV)
- They drank wine, and praised the gods of gold, and of silver, of brass, of iron, of wood, and of stone.
- World English Bible (WEB)
- They drank wine, and praised the gods of gold, and of silver, of bronze, of iron, of wood, and of stone.
- American Standard Version (ASV)
- They drank wine, and praised the gods of gold, and of silver, of brass, of iron, of wood, and of stone.
- Bible in Basic English (BBE)
- They took their wine and gave praise to the gods of gold and silver, of brass and iron and wood and stone.
- Darby Translation (DBY)
- They drank wine, and praised the gods of gold and of silver, of brass, of iron, of wood, and of stone.
- Webster's Bible (WBS)
- They drank wine, and praised the gods of gold, and of silver, of brass, of iron, of wood, and of stone.
- Young's Literal Translation (YLT)
- they have drunk wine, and have praised the gods of gold, and of silver, of brass, of iron, of wood, and of stone.
Read in context
- 2ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
- 3ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
- 4ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- 5ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
- 6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
Cross references
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Habakkuk 2:19 ಹಬಕ್ಕೂಕ 2:19ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Psalm 135:15–18 ಕೀರ್ತನೆಗಳು 135:15–18ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ. ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Revelation 9:20–21 ಪ್ರಕಟನೆ 9:20–21ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ. ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Jeremiah 10:4–9 ಯೆರೆಮೀಯ 10:4–9ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ. ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- Isaiah 40:19–20 ಯೆಶಾಯ 40:19–20ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- Isaiah 46:6–7 ಯೆಶಾಯ 46:6–7ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Hosea 2:8–13 ಹೋಶೇಯ 2:8–13ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ. ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು. ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು. ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು. ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
- Isaiah 42:17 ಯೆಶಾಯ 42:17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.