Daniel · chapter 6 · verse 18
Daniel 6:18 in Kannada
ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
Aa mele arasanu tanna aramanege hintirugi upavaasa dindale raatriyannu kaledanu. Gaana, vaadyagalu avana munde taralpadalilla; nidreyu avanannu bittu hoyitu.
Daniel 6:18 in English
- King James Version (KJV)
- Then the king went to his palace, and passed the night fasting: neither were instruments of musick brought before him: and his sleep went from him.
- World English Bible (WEB)
- Then the king went to his palace, and passed the night fasting. No musical instruments were brought before him; and his sleep fled from him.
- American Standard Version (ASV)
- Then the king went to his palace, and passed the night fasting; neither were instruments of music brought before him: and his sleep fled from him.
- Bible in Basic English (BBE)
- Then the king went to his great house, and took no food that night, and no ... were placed before him, and his sleep went from him.
- Darby Translation (DBY)
- Then the king went to his palace, and passed the night fasting; neither were concubines brought before him; and his sleep fled from him.
- Webster's Bible (WBS)
- Then the king went to his palace, and passed the night fasting: neither were instruments of music brought before him: and his sleep went from him.
- Young's Literal Translation (YLT)
- Then hath the king gone to his palace, and he hath passed the night fasting, and dahavan have not been brought up before him, and his sleep hath fled [from] off him.
Read in context
- 16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
- 17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
- 18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- 19ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
- 20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
Cross references
- Daniel 2:1 ದಾನಿಯೇಲನು 2:1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- Esther 6:1 ಎಸ್ತೇರಳು 6:1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
- 2 Samuel 12:16–17 2 ಸಮುವೇಲನು 12:16–17ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು. ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
- Psalm 77:4 ಕೀರ್ತನೆಗಳು 77:4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- Psalm 137:2 ಕೀರ್ತನೆಗಳು 137:2ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
- Isaiah 24:8–9 ಯೆಶಾಯ 24:8–9ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
- Job 21:12 ಯೋಬನು 21:12ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
- 2 Samuel 19:24 2 ಸಮುವೇಲನು 19:24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- Revelation 18:22 ಪ್ರಕಟನೆ 18:22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
- Amos 6:4–6 ಆಮೋಸ 6:4–6ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Jonah 3:3–9 ಯೋನ 3:3–9ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು. ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Original words (Hebrew)
- Then · H116אֱדַיִן ʼĕdayin
- king · H4430מֶלֶךְ melek
- went · H236אֲזַל ʼăzal
- palace · H1965הֵיכַל hêykal
- night · H956בּוּת bûwth
- fasting · H2908טְוָת ṭᵉvâth
- neither · H3809לָא lâʼ
- instruments · H1761דַּחֲוָה dachăvâh
- brought · H5954עֲלַל ʻălal
- before · H6925קֳדָם qŏdâm
- sleep · H8139שְׁנָה shᵉnâh
- went · H5075נְדַד nᵉdad
- him · H5922עַל ʻal