Daniel · chapter 7 · verse 3
Daniel 7:3 in Kannada
ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
Ondakkondu bere bereya roopada naalku dodda mrugagalu samu dradolaginda mele bandavu.
Daniel 7:3 in English
- King James Version (KJV)
- And four great beasts came up from the sea, diverse one from another.
- World English Bible (WEB)
- Four great animals came up from the sea, different from one another.
- American Standard Version (ASV)
- And four great beasts came up from the sea, diverse one from another.
- Bible in Basic English (BBE)
- And four great beasts came up from the sea, different one from another.
- Darby Translation (DBY)
- And four great beasts came up from the sea, different one from another.
- Webster's Bible (WBS)
- And four great beasts came up from the sea, diverse one from another.
- Young's Literal Translation (YLT)
- and four great beasts are coming up from the sea, diverse one from another.
Read in context
- 1ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
- 2ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
- 3ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
- 4ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
- 5ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
Cross references
- Revelation 13:1 ಪ್ರಕಟನೆ 13:1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
- Daniel 7:17 ದಾನಿಯೇಲನು 7:17ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.
- Daniel 7:4–8 ದಾನಿಯೇಲನು 7:4–8ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Daniel 2:32–33 ದಾನಿಯೇಲನು 2:32–33ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
- Zechariah 6:1–8 ಜೆಕರ್ಯ 6:1–8ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು. ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು; ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು. ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು. ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ. ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ. ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- Ezekiel 19:3–8 ಯೆಹೆಜ್ಕೇಲನು 19:3–8ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು. ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು. ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು. ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.
- Psalm 76:4 ಕೀರ್ತನೆಗಳು 76:4ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
- Daniel 2:37–40 ದಾನಿಯೇಲನು 2:37–40ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ. ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ. ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು. ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.