Daniel · chapter 8 · verse 10
Daniel 8:10 in Kannada
ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.
Adu aakaasha sainyada ettarakke beledu aa sainyadalliyoo nakshatragalalliyoo kelavannu nelakke talli avugalannu tuliduhaakitu.
Daniel 8:10 in English
- King James Version (KJV)
- And it waxed great, [even] to the host of heaven; and it cast down [some] of the host and of the stars to the ground, and stamped upon them.
- World English Bible (WEB)
- It grew great, even to the army of the sky; and it cast down some of the army and of the stars to the ground and trampled on them.
- American Standard Version (ASV)
- And it waxed great, even to the host of heaven; and some of the host and of the stars it cast down to the ground, and trampled upon them.
- Bible in Basic English (BBE)
- And it became great, even as high as the army of heaven, pulling down some of the army, even of the stars, to the earth and crushing them under its feet.
- Darby Translation (DBY)
- And it became great, even to the host of heaven; and it cast down [some] of the host and of the stars to the ground, and trampled upon them.
- Webster's Bible (WBS)
- And it grew great, [even] to the host of heaven; and it cast down [some] of the host and of the stars to the ground, and stamped upon them.
- Young's Literal Translation (YLT)
- yea, it exerteth unto the host of the heavens, and causeth to fall to the earth of the host, and of the stars, and trampleth them down.
Read in context
- 8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
- 9ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
- 10ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.
- 11ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
- 12ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
Cross references
- Revelation 12:4 ಪ್ರಕಟನೆ 12:4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Daniel 7:7 ದಾನಿಯೇಲನು 7:7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Daniel 8:7 ದಾನಿಯೇಲನು 8:7ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
- Daniel 11:28 ದಾನಿಯೇಲನು 11:28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
- Daniel 11:33–36 ದಾನಿಯೇಲನು 11:33–36ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು. ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು. ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು; ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- Daniel 11:30 ದಾನಿಯೇಲನು 11:30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
- Daniel 8:24–25 ದಾನಿಯೇಲನು 8:24–25ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು. ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.