Daniel · chapter 8 · verse 16
Daniel 8:16 in Kannada
ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
Naanu oolaa nadiya madhyadalliddaaga--gabriyelane, ee manushyanu darshanavannu arthamaadikolluvante maadu endu heluva manushyana dhvaniyannu kelidenu.
Daniel 8:16 in English
- King James Version (KJV)
- And I heard a man’s voice between [the banks of] Ulai, which called, and said, Gabriel, make this [man] to understand the vision.
- World English Bible (WEB)
- I heard a man’s voice between the banks of the Ulai, which called and said, “Gabriel, make this man understand the vision.”
- American Standard Version (ASV)
- And I heard a man’s voice between [the banks of] the Ulai, which called, and said, Gabriel, make this man to understand the vision.
- Bible in Basic English (BBE)
- And the voice of a man came to my ears between the sides of the Ulai, crying out and saying, Gabriel, make the vision clear to this man.
- Darby Translation (DBY)
- And I heard a man's voice between [the banks of] the Ulai; and he called and said, Gabriel, make this [man] to understand the vision.
- Webster's Bible (WBS)
- And I heard a man's voice between [the banks of] Ulai, which called, and said, Gabriel, make this [man] to understand the vision.
- Young's Literal Translation (YLT)
- And I hear a voice of man between [the banks of] Ulai, and he calleth and saith: Gabriel, cause this [one] to understand the appearance.
Read in context
- 14ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
- 15ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
- 16ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
- 17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
- 18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
Cross references
- Luke 1:26 ಲೂಕನು 1:26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- Daniel 12:5–7 ದಾನಿಯೇಲನು 12:5–7ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು. ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
- Daniel 8:2 ದಾನಿಯೇಲನು 8:2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- Daniel 10:11–12 ದಾನಿಯೇಲನು 10:11–12ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು. ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Acts 10:13 ಅಪೊಸ್ತಲರ ಕೃತ್ಯಗಳು 10:13ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- Zechariah 1:9 ಜೆಕರ್ಯ 1:9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- Acts 9:7 ಅಪೊಸ್ತಲರ ಕೃತ್ಯಗಳು 9:7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.