Daniel · chapter 8 · verse 9
Daniel 8:9 in Kannada
ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
Avugalalli ondarolaginda chikka kombu moletu, bahala doddadaagi beledu, dakshinada kadegoo poorvada kadegoo ramya deshada kadegoo prabalavaayitu.
Daniel 8:9 in English
- King James Version (KJV)
- And out of one of them came forth a little horn, which waxed exceeding great, toward the south, and toward the east, and toward the pleasant [land].
- World English Bible (WEB)
- Out of one of them came out a little horn which grew exceedingly great—toward the south, and toward the east, and toward the glorious land.
- American Standard Version (ASV)
- And out of one of them came forth a little horn, which waxed exceeding great, toward the south, and toward the east, and toward the glorious [land].
- Bible in Basic English (BBE)
- And out of one of them came another horn, a little one, which became very great, stretching to the south and to the east and to the beautiful land.
- Darby Translation (DBY)
- And out of one of them came forth a little horn, which became exceeding great, toward the south, and toward the east, and toward the beauty [of the earth].
- Webster's Bible (WBS)
- And out of one of them came forth a little horn, which became exceeding great, towards the south, and towards the east, and towards the pleasant [land] .
- Young's Literal Translation (YLT)
- And from the one of them come forth hath a little horn, and it exerteth itself greatly toward the south, and toward the east, and toward the beauteous [land];
Read in context
- 7ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
- 8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
- 9ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
- 10ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.
- 11ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
Cross references
- Daniel 11:16 ದಾನಿಯೇಲನು 11:16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
- Daniel 7:8 ದಾನಿಯೇಲನು 7:8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Ezekiel 20:6 ಯೆಹೆಜ್ಕೇಲನು 20:6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Daniel 8:23–24 ದಾನಿಯೇಲನು 8:23–24ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು. ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- Daniel 11:25–45 ದಾನಿಯೇಲನು 11:25–45ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು. ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು. ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು. ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು. ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ. ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು. ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು. ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು. ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು. ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು. ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು; ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು. ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ. ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು. ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು. ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು. ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು. ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು. ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು. ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು. ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Psalm 105:24 ಕೀರ್ತನೆಗಳು 105:24ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
- Daniel 7:20–26 ದಾನಿಯೇಲನು 7:20–26ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು. ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು; ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು. ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು. ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Daniel 11:21 ದಾನಿಯೇಲನು 11:21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.